29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿಸಿನಿಮಾ

ಒಂದು ಸಣ್ಣ ತಪ್ಪು 40 ದಿನ ಬೆಡ್‌ ರೆಸ್ಟ್‌ಗೆ ಜಾರಿದ ರಕುಲ್ ಪ್ರೀತ್ ಸಿಂಗ್‌

ವರ್ಕೌಟ್ ವೇಳೆ ಮಾಡಿದ ಒಂದು ಸಣ್ಣ ತಪ್ಪು ನಟಿ ರಕುಲ್ ಪ್ರೀತ್ ಸಿಂಗ್‌ಗೆ ದೊಡ್ಡ ಸಂಕಷ್ಟ ತಂದಿತ್ತು. 80 ಕೆಜಿ ತೂಕ ಎತ್ತುವ ವೇಳೆ ಗಾಯಗೊಂಡಿದ್ದ ಅವರು, ಸುಮಾರು 40 ದಿನಗಳ ಕಾಲ ಬೆಡ್‌ರೆಸ್ಟ್ ಮಾಡಬೇಕಾಯಿತು ಎಂದು ತಿಳಿಸಿದ್ದಾರೆ. ಫಿಟ್ನೆಸ್‌ಗೆ ಹೆಚ್ಚಿನ ಆದ್ಯತೆ ನೀಡುವ ನಟಿ ರಕುಲ್ ಪ್ರೀತ್ ಸಿಂಗ್ ವರ್ಕೌಟ್‌ ಮಾಡುವಾಗ ಮಾಡಿಕೊಂಡ ಎಡವಟ್ಟಿನಿಂದ ದೊಡ್ಡ ಅಪಾಯ ತಂದುಕೊಂಡಿದ್ದರು. ಈ ಕುರಿತು ಸ್ವತಃ ನಟಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ತಮಗಾದ ಗಾಯದ ಬಗ್ಗೆ ಅವರು ಮಾತನಾಡಿದ್ದಾರೆ. 80 ಕೆಜಿ ತೂಕದ ಡೆಡ್‌ಲಿಫ್ಟ್ ಮಾಡುವಾಗ ಸುರಕ್ಷತಾ ಬೆಲ್ಟ್ ಧರಿಸಿರಲಿಲ್ಲ. ಇದೇ ಕಾರಣದಿಂದ ಬೆನ್ನಿನ ಕೆಳಭಾಗಕ್ಕೆ ಗಂಭೀರ ಗಾಯವಾಗಿತ್ತು ಎಂದು ರಕುಲ್ ಹೇಳಿದ್ದಾರೆ. ಬಳಿಕ ನನಗೆ ಸ್ಲಿಪ್ ಡಿಸ್ಕ್ ಸಮಸ್ಯೆ ಕಾಣಿಸಿಕೊಂಡಿದ್ದು, ಬರೊಬ್ಬರಿ 40 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದರು. ಗಾಯದ ನೋವಿನ ಜೊತೆಗೆ ಮಾನಸಿಕವಾಗಿಯೂ ಸಾಕಷ್ಟು ತೊಂದರೆ ಅನುಭವಿಸಿದ್ದೆ ಎಂದು ಹೇಳಿದರು. ಇದನ್ನೂ ಓದಿ : ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​​..!

ಫಿಟ್ ಆಗಿರಬೇಕು ಎನ್ನುವ ಕಾರಣಕ್ಕೆ ಹಲವರು ಹೆಚ್ಚು ತೂಕ ಎತ್ತಲು ಪ್ರಯತ್ನಿಸುತ್ತಾರೆ. ಆದರೆ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಹೋದರೆ ಗಂಭೀರ ಸಮಸ್ಯೆಗಳು ಎದುರಾಗಬಹುದು. ವಿಶೇಷವಾಗಿ ಡೆಡ್‌ಲಿಫ್ಟ್‌ನಂತಹ ವ್ಯಾಯಾಮ ಮಾಡುವಾಗ ಸೇಫ್ಟಿ ಬೆಲ್ಟ್ ಧರಿಸುವುದು ಅತ್ಯಗತ್ಯ. ಒಂದು ಕ್ಷಣದ ನಿರ್ಲಕ್ಷ್ಯವೂ ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ರಕುಲ್ ಪ್ರೀತ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

Related posts

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ..!

ಮಹಿಳೆಯರ ಮೇಲೆ ಕಾಲಿಂದ ನೀರು ಎರಚುತ್ತಾರೆ, ಗೂಂಡಾಗಿರಿ ಮಾಡ್ತಿದ್ದಾರೆ: ಕನ್ನಡಿಗರ ಆಕ್ರೋಶ..!

Kalpana Editor

ಈ ವಾರ ಸಂಪುಟ ವಿಸ್ತರಣೆ ಪೂರ್ಣ; ಬರ, ನೀರಾವರಿ ಯೋಜನೆ ವಿಚಾರದ ಬಗ್ಗೆ ಸಂಸದರಿಗೆ ಮನವರಿಕೆ – ಸಿಎಂ ಡಿಕೆ ಶಿವಕುಮಾರ್

Kalpana Editor