August 1, 2026
kranthikidi.com
ತಾಜಾಸುದ್ದಿರಾಜ್ಯ

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ..!

ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ‌ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. ಅವರಿಗೆ ಈ ಹಿಂದೆ ಹಾರ್ಟ್ ಬ್ಲಾಕ್ ಆಗಿತ್ತು. ಸ್ಟೆಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.

ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸಿಎಂ ಡಿಕೆಶಿವಕುಮಾರ್ ಆಪ್ತರಾಗಿದ್ದು, ಶಾಸಕರ ಆರೋಗ್ಯ ವಿಚಾರಿಸಲು ಸಿಎಂ ಡಿಕೆಶಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಗೆ ಸಿಎಂ ಡಿಕೆಶಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಲೇ ಆಸ್ಪತ್ರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ವಿಕೆ ಶ್ರೀನಿವಾಸ್ ಅವರು ಮಾತನಾಡಿ, ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾದರು. ಡಯಾಬಿಟಿಸ್ ಕೂಡಾ ಇದೆ. ತಕ್ಷಣವೇ ಆಂಜಿಯೋಗ್ರಾಮ್ ಮಾಡಿಸಿದಾಗ ಹೃದಯದಲ್ಲಿ 3 ಬ್ಲಾಕ್ ಇರುವುದು ಕಂಡುಬಂದಿದೆ. ಹಾಗಾಗಿ ಬೈಪಾಸ್ ಸರ್ಜರಿ ಇನ್ನೆರಡು ಮೂರು ದಿನದಲ್ಲಿ ಮಾಡಲಾಗುವುದು ಎಂದಿದ್ದಾರೆ. ಇದಕ್ಕೆ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ : ಇಂದು ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Related posts

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ – ಪ್ರಿಯಾಂಕ್‌ ಖರ್ಗೆ

Kalpana Editor

“ಮಜಾಭಾರತ” ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!

Kalpana Editor

ಕಾನೂನಿನ ಆಳವಾದ ಜ್ಞಾನದಿಂದ ಸಮರ್ಥ ‘ವಾದ’ ಮಂಡನೆ ಸಾಧ್ಯ – ಡಿಸಿಎಂ ಪರಮೇಶ್ವರ

Kalpana Editor