ಚೆನ್ನೈ : ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ವಿಜಯ್ ವಿರುದ್ಧ ನಡೆಸಿದ ವಾಗ್ದಾಳಿ ವೇಳೆ ಉದಯನಿಧಿ ಸ್ಟಾಲಿನ್ ಮಾಡಿದ್ದ ಹೇಳಿಕೆಯು, ನಟಿ ತ್ರಿಷಾ ಅವರನ್ನು ಉದ್ದೇಶಿಸಿ ನೀಡಿದ ಪರೋಕ್ಷ ದ್ವಂದ್ವಾರ್ಥದ ಮಾತು ಎಂದು ವ್ಯಾಖ್ಯಾನಿಸಲಾಗಿತ್ತು. ಈ ಹೇಳಿಕೆಗೆ ತಮಿಳುನಾಡಿನಾದ್ಯಂತ ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತವಾಗಿತ್ತು.
ಮದ್ರಾಸ್ ಹೈಕೋರ್ಟ್ನಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ, ತಂಜಾವೂರಿಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಬಯಸುತ್ತಿಲ್ಲ.
ಕೇವಲ ವಿಚಾರಣೆ ನಡೆಸಿದ ನಂತರ ಅವರನ್ನು ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಹೊಂದಿಲ್ಲ, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ : ನಾನು ನಿಷ್ಠಾವಂತ ಕಾರ್ಯಕರ್ತ – ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ; ಪ್ರದೀಪ್ ಈಶ್ವರ್
