July 12, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ಎಸ್.ಜಾನಕಿ ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿ – ಬೊಮ್ಮಾಯಿ

ಹಾವೇರಿ : ಖ್ಯಾತ ಬಹುಭಾಷಾ ಗಾಯಕಿ ಎಸ್.ಜಾನಕಿ ಅವರು ದೈಹಿಕವಾಗಿ ಅವರು ಇಂದು ನಮ್ಮನ್ನು ಅಗಲಿದ್ದರೂ, ಅವರು ಹಾಡಿರುವ ಹಾಡುಗಳು ಮತ್ತು ಸಂಗೀತದ ಮೂಲಕ ಕರ್ನಾಟಕದ ಜನತೆಯ ಹೃದಯದಲ್ಲಿ ಅವರು ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ರಾಜ್ಯ ಸರ್ಕಾರ ಮೈಸೂರಿನಲ್ಲಿ ಎಸ್. ಜಾನಕಿ ಅವರ ನೆನಪಿನಲ್ಲಿ ಒಂದು ಸುಸಜ್ಜಿತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಜಾನಕಿ ಅವರು ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸತತವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ಸಂಗೀತ ಸೇವೆ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಬರೋಬ್ಬರಿ 17 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಅವರು, ಪ್ರತಿಯೊಂದು ಹಾಡಿನಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು ಹಾಡಿದ ಎಲ್ಲಾ ಹಾಡುಗಳು ಜನಪ್ರಿಯವಾಗಿವೆ ಎಂದು ಅವರ ಸಾಧನೆಯನ್ನು ಸ್ಮರಿಸಿದರು.

ಎಸ್. ಜಾನಕಿ ಅವರ ಧ್ವನಿಯ ಬದಲಾವಣೆ ಅಥವಾ ಮಾಡ್ಯುಲೇಶನ್ ಅತ್ಯಂತ ವಿಶಿಷ್ಟವಾಗಿತ್ತು. ಸಣ್ಣ ಮಗುವಿನ ಧ್ವನಿಯಿಂದ ಹಿಡಿದು ವಯೋವೃದ್ಧರ ಧ್ವನಿಯವರೆಗೂ ಎಲ್ಲ ತರಹದ ಹಾಡುಗಳನ್ನು ಹಾಡುವ ಅದ್ಭುತ ಶಕ್ತಿ ಅವರಿಗೆ ಒಲಿದಿತ್ತು. ಅವರು ಸಾಕ್ಷಾತ್ ಸರಸ್ವತಿಯ ಪ್ರತಿರೂಪದಂತಿದ್ದರು. ದೈಹಿಕವಾಗಿ ಅವರು ಇಂದು ನಮ್ಮನ್ನು ಅಗಲಿದ್ದರೂ, ಅವರು ಹಾಡಿರುವ ಹಾಡುಗಳು ಮತ್ತು ಸಂಗೀತದ ಮೂಲಕ ಕರ್ನಾಟಕದ ಜನತೆಯ ಹೃದಯದಲ್ಲಿ ಅವರು ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.

ಎಸ್. ಜಾನಕಿ ಅವರಿಗೆ ಮೈಸೂರಿನ ಬಗ್ಗೆ ಅಪಾರವಾದ ಒಲವಿತ್ತು. ತಮ್ಮ ಕೊನೆಯ ದಿನಗಳನ್ನು ಮೈಸೂರಿನಲ್ಲೇ ಕಳೆಯಬೇಕೆಂಬ ಇಚ್ಛೆ ಹೊಂದಿದ್ದ ಅವರು, ತಮ್ಮ ಅಂತಿಮ ಸಂಸ್ಕಾರವೂ ಮೈಸೂರಿನಲ್ಲೇ ನಡೆಯಬೇಕೆಂದು ಬಯಸಿದ್ದರು. ಇದು ಅವರಿಗೆ ಕನ್ನಡಿಗರು ಮತ್ತು ಕರ್ನಾಟಕದ ಮೇಲಿದ್ದ ಪ್ರೀತಿಯನ್ನು ತೋರಿಸುತ್ತದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಎಸ್. ಜಾನಕಿ ಅವರ ನೆನಪಿನಲ್ಲಿ ಒಂದು ಸುಸಜ್ಜಿತ ಸ್ಮಾರಕ ನಿರ್ಮಾಣ ಮಾಡಬೇಕು. ಅವರು ಹಾಡಿರುವ ವಿವಿಧ ಪ್ರಕಾರದ ಹಾಡುಗಳ ಸಂಗ್ರಹ, ಅವರು ಹಾಡಿದ ರೀತಿಗಳ ಬಗ್ಗೆ ಸಂಶೋಧನೆ ನಡೆಸಲು ಮತ್ತು ಸಂಗೀತ ಕಲಿಯುವ ಆಸಕ್ತಿಯುಳ್ಳ ಯುವ ಪ್ರತಿಭೆಗಳಿಗೆ ತರಬೇತಿ ಹಾಗೂ ಸ್ಫೂರ್ತಿ ನೀಡುವಂತಹ ವ್ಯವಸ್ಥೆಯನ್ನು ಆ ಸ್ಮಾರಕದಲ್ಲಿ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ : ಪೆಟ್ರೋಲ್‌ ಟ್ಯಾಂಕ್‌ಗೆ ನೀರು ಹಾಕಿ ಎಥೆನಾಲ್‌ ವಿರುದ್ಧ ಅಪಪ್ರಚಾರ; ಯೂಟ್ಯೂಬರ್‌ ವಿರುದ್ಧ ಟೊಯೋಟಾ ಎಫ್‌ಐಆರ್‌

Related posts

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ; ಸಂಧ್ಯಾ ನಾಗರಾಜ್ ವಿರುದ್ಧ ದೂರು..!

Kalpana Editor

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ; ಜೂ. 18ರಂದು ಎಲೆಕ್ಷನ್​​..!

Kalpana Editor

ಮಳೆಗೆ ಸೇತುವೆ ಕುಸಿತ; ಚಿಂಚೋಳಿ – ಭಾಲ್ಕಿ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ..!

Kalpana Editor