23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಪ್ಯಾಲೆಸ್ ಗ್ರೌಂಡ್‌ನಲ್ಲಿ ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಅಧಿಕಾರ ಹಸ್ತಾಂತರ ದಾಖಲೆಗಳಿಗೆ ಡಿಕೆ ಶಿವಕುಮಾರ್ ಹಾಗೂ ಬಿಕೆ ಹರಿಪ್ರಸಾದ್ ಇಬ್ಬರೂ ಸಹಿ ಹಾಕಿದರು.

ಪದಗ್ರಹಣ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಕೆ ಸುರೇಶ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹೆಚ್.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಚೆಲುವರಾಯಸ್ವಾಮಿ, ಆರ್.ವಿ ದೇಶಪಾಂಡೆ, ಎಂ.ಬಿ ಪಾಟೀಲ್, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ವೀರಪ್ಪ ಮೊಯ್ಲಿ, ಸಲೀಂ ಅಹಮದ್, ಝಮೀರ್ ಅಹಮದ್ ಖಾನ್, ಯು.ಟಿ ಖಾದರ್, ಕೆ.ಜೆ ಜಾರ್ಜ್, ಹೆಚ್.ಸಿ ಮಹದೇವಪ್ಪ, ತನ್ವೀರ್ ಸೇಠ್, ವಸಂತ್ ಕುಮಾರ್, ಮಂಜುನಾಥ್ ಭಂಡಾರಿ ಮೊದಲಾದವರು ಭಾಗಿಯಾಗಿದ್ದರು. ಇದನ್ನೂ ಓದಿ : ನಮ್ಮ ಡ್ಯಾಂಗಳು ತಮಿಳುನಾಡಿಗೆ ನೀರು ಬಿಡುವ ಡ್ಯಾಂಗಳಾಗಿವೆ; ಹೆಚ್‌ಡಿಕೆ ಕಿಡಿ

Related posts

ದುಡಿಯುವ ಕೈಗೆ ಉದ್ಯೋಗ; ಉದ್ಯೋಗ ಖಾತ್ರಿಗೆ ಹಣದ ಕೊರತೆ ಇಲ್ಲ – ಈಶ್ವರ ಖಂಡ್ರೆ

Kalpana Editor

ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪಿಎಸ್ಐ ಅರೆಸ್ಟ್‌..!

Kalpana Editor

ದೇಶವನ್ನು ಬಲಪಡಿಸುವಲ್ಲಿ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ: ಪ್ರಧಾನಿ ಮೋದಿ

Kalpana Editor