23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ..!

ಬೆಂಗಳೂರು : ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ, ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿತ್ತು. ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ರಾಜ್ಯದಲ್ಲಿ 1200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್‌ ಔಷಧಿ ಮಾರಾಟ ಆಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಉಳಿದ ಜನೌಷಧಿ ಕೇಂದ್ರಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಜನೌಷಧಿ ಮಾಲೀಕರು ಶೋಕಾಸ್ ನೋಟಿಸ್‌ಗೆ ಉತ್ತರವನ್ನು ಕೊಡಬೇಕು. ಯಾಕೆ ಬ್ರ್ಯಾಂಡೆಡ್‌ ಮಾರಾಟ ಮಾಡುತ್ತಿದ್ದೀರಾ ಎಂದು ಉತ್ತರ ಕೊಡಬೇಕು. ಇಲ್ಲದೇ ಹೋದರೆ ಕಾನೂನು ರೀತಿಯ ಕ್ರಮ ಜರುಗಿಸೋದಕ್ಕೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ. ಇದನ್ನೂ ಓದಿ : ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Related posts

ಫೇಸ್‌ಬುಕ್‌ನಿಂದ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ

Kalpana Editor

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಉಗ್ರ ಹೋರಾಟ; ದರ್ಶನ್ ಪುಟ್ಟಣ್ಣಯ್ಯ

Kalpana Editor

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್

Kalpana Editor