29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಹುಟ್ಟುಹಬ್ಬದಿಂದಾಗಿ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರು – ಡಿಕೆಶಿ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಇದ್ದಿದ್ದರಿಂದ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದು ಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಮತ್ತು ನಾನು ಸೇರಿ ಪಟ್ಟಿ ಸಿದ್ಧಪಡಿಸಿದ್ದೆವು. ಅವ್ರ ಹುಟ್ಟುಹಬ್ಬ ಇತ್ತು ಅದಕ್ಕೇ ಅವರು ಬಂದಿಲ್ಲ. ಯಾವ ಅಸಮಾಧಾನವೂ ಇಲ್ಲ ಎಂದಿದ್ದಾರೆ.

ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಅದಲು-ಬದಲು ವಿಚಾರವಾಗಿ, ಹೈಕಮಾಂಡ್ ಕಳಿಸಿದ ಪಟ್ಟಿಯಂತೆ ಸ್ಥಾನ ಸಿಕ್ಕಿದೆ. ತಾಂತ್ರಿಕ ಸಮಸ್ಯೆಯಾಗಿ ಗಾಯತ್ರಿ ಶಾಂತೇಗೌಡರನ್ನು ಕೈ ಬಿಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸೈಲೆಂಟಾಗಿದ್ದರು. ಯಾವುದೇ ರಾಜಕೀಯ ಹೇಳಿಕೆಗಳನ್ನು ಅವರು ನೀಡಿರಲಿಲ್ಲ.

ಹೀಗಿದ್ದರೂ ಮೊದಲ ಸಂಪುಟ ರಚನೆಯ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಕೈಮೇಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹಾಗಾಗಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರ ಕೈಮೇಲಾಗಿದೆ. ಈ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನಗೊಂಡು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಹೊರಗುಳಿದಿರುವುದು ಗಮನ ಸೆಳೆದಿದೆ. ಮತ್ತು ನಾನಾ ಚರ್ಚೆಗೆ ಕಾರಣವಾಗಿದೆ.

ತಮ್ಮ ಹುಟ್ಟುಹಬ್ಬದ ಅಂಗವಾಗಿ ಅಧಿಕೃತ ನಿವಾಸ ಕಾವೇರಿಯಲ್ಲೆ? ಉಳಿದು ಅಭಿಮಾನಿಗಳು, ಬೆಂಬಲಿಗರಿಂದ ಶುಭಾಶಯ ಸ್ವಿಕರಿಸುತ್ತಾ ಖುಷಿ ಖುಷಿಯಾಗಿದ್ದ ಸಿದ್ದರಾಮಯ್ಯ ಅವರು, ನೂತನ ಸಚಿವರ ಪಟ್ಟಿಯನ್ನು ಎಐಸಿಸಿ ಹೈಕಮಾಂಡ್ ಪ್ರಕಟಿಸುತ್ತಿದ್ದಂತೆ ಕೆರಳಿ ಕೆಂಡವಾದರು. ತಮ್ಮ ಅಭಿಪ್ರಾಯ ಕಡೆಗಣಿಸಿ ರಾಜಧಾನಿಯ ಪ್ರಭಾವಿ ವ್ಯಕ್ತಿಗೆ ಮತ್ತೆ ಸಂಪುಟದಲ್ಲಿ ಅವಕಾಶ ಕಲ್ಪಿಸಿದ್ದು ಸಿದ್ದರಾಮಯ್ಯ ಅವರನ್ನು ಸಿಟ್ಟಿಗೇಳುವಂತೆ ಮಾಡಿದೆ ಎನ್ನಲಾಗಿದೆ. ಇದನ್ನೂ ಓದಿ : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ; ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಸಭೆ..!

Related posts

ಮನೆಯಲ್ಲೇ ಸುಲಭವಾಗಿ ಮಾಡಿ ಮುಂಬೈ ಸ್ಪೆಷಲ್ ಮಸಾಲ ಸ್ಯಾಂಡ್‌ವಿಚ್

kknewskannada1987@gmail.com

ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ – ಡಿ.ಕೆ. ಶಿವಕುಮಾರ್

Kalpana Editor

ಭೀಕರ ಬರವಿದ್ದರೂ ಕೈ ಕಟ್ಟಿ ಕೂತ ಸರ್ಕಾರ; ಸದನದಲ್ಲಿ ರಾಜ್ಯದ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ – ಬಿ.ವೈ. ವಿಜಯೇಂದ್ರ

Kalpana Editor