August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅಧಿಕೃತ..!

ಬೆಂಗಳೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ನಾಳೆ (ಗುರುವಾರ) ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ, ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.

ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು.

ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಸಿದ್ದರಾಮಯ್ಯ ಅವರು ಅಲ್ಲಿಂದ ಹೊರಟು ಹೋಗಿದ್ದರು.

Related posts

ನೇರಳೆ ಮಾರ್ಗದ ಪ್ರಯಾಣಿಕರೇ ಗಮನಿಸಿ; ಮೆಟ್ರೋ ಸಂಚಾರ ತಾತ್ಕಾಲಿಕ ವ್ಯತ್ಯಯ..!

Kalpana Editor

ಸಚಿವ ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್‌ – ಹೈಕಮಾಂಡ್ ಮುಂದೆ ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Kalpana Editor

ಚಿಕ್ಕಬಳ್ಳಾಪುರದಲ್ಲಿ ಟಾರ್ಗೆಟ್ ರಾಜಕಾರಣ: 9 ಜನರ ಬಂಧನ ಖಂಡಿಸಿ ನಿಖಿಲ್ ಕಿಡಿ

Kalpana Editor