August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರೋಚಕವಾಗಿದೆ, ಸಿದ್ದರಾಮಯ್ಯ ತಂತ್ರಗಾರಿಕೆ; ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್..!

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ದೆಹಲಿಗೆ ತೆರಳಿದ್ದು, ಇಂದು (ಮೇ 26 ರ ಬುಧವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಸಿದ್ದರಾಮನಹುಂಡಿಯ ಮಾಸ್ ಲೀಡರ್ ಸಿದ್ದರಾಮಯ್ಯ ಹಾಗೂ ಕನಕಪುರದ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರ ನಡುವಿನ ಈ ‘ಪವರ್ ಫೈಟ್’ಗೆ ದಿಲ್ಲಿ ದರ್ಬಾರ್‌ನಲ್ಲಿ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ಸಭೆಯ ಅಜೆಂಡಾ ಎದುರಿಸಲು ಇಬ್ಬರೂ ನಾಯಕರು ತಮ್ಮದೇ ಆದ ಅಸ್ತ್ರಗಳೊಂದಿಗೆ ಸಜ್ಜಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರ ದಂಡನ್ನೇ ಕಟ್ಟುಕೊಂಡು ದೆಹಲಿಗೆ ತೆರಳುವ ಮೂಲಕ ಪರೋಕ್ಷವಾಗಿ ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯ ಒತ್ತಡ ಹೇರಿದರೆ, ಜಿ. ಪರಮೇಶ್ವರ್ ಅವರ ಹೆಸರನ್ನು ಮುಂಚೂಣಿಗೆ ತರುವ ಅಥವಾ ಆಪ್ತರ ಸಲಹೆ ಪಡೆದು ನಿರ್ಧಾರ ಪ್ರಕಟಿಸುವುದಾಗಿ ಹೇಳಿ ಕಾಲಹರಣ ಮಾಡುವ ಸೂತ್ರವನ್ನು ಸಿದ್ದರಾಮಯ್ಯ ಸಿದ್ಧಪಡಿಸಿಕೊಂಡಿದ್ದಾರೆ. ಇದರೊಂದಿಗೆ ಸಂಪುಟ ವಿಸ್ತರಣೆ ಮಾಡದಿದ್ದರೆ ಉಂಟಾಗಬಹುದಾದ ರಾಜಕೀಯ ನಷ್ಟದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಲು ತಯಾರಿ ನಡೆಸಿದ್ದಾರೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ತಮಗೆ ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಪಟ್ಟು ಹಿಡಿಯಲಿದ್ದಾರೆ. ಮುಂಬರುವ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ನಾಯಕತ್ವದ ಅನಿವಾರ್ಯತೆ ಹಾಗೂ ಗಾಂಧಿ ಕುಟುಂಬಕ್ಕೆ, ವಿಶೇಷವಾಗಿ ಸೋನಿಯಾ ಗಾಂಧಿ ಅವರಿಗೆ ತಾವು ತೋರಿರುವ ನಿಷ್ಠೆಯ ಭಾವನಾತ್ಮಕ ವಿಷಯಗಳನ್ನು ಮುಂದಿಡಲಿದ್ದಾರೆ.

ಕೇವಲ ಸಂಪುಟ ಪುನಾರಚನೆಗೆ ದೆಹಲಿ ಭೇಟಿ ಸೀಮಿತವಾದರೆ ತಮಗೆ ಹಿನ್ನಡೆಯಾಗಲಿದೆ ಎಂಬ ಆತಂಕದಲ್ಲಿರುವ ಡಿಸಿಎಂ, ಮೊದಲು ನಾಯಕತ್ವದ ಗೊಂದಲ ನಿವಾರಣೆಗೆ ಹಠ ಹಿಡಿಯುವ ಸಾಧ್ಯತೆ ಇದೆ. ಇಬ್ಬರು ಮಹಾ ನಾಯಕರ ಹಿತಾಸಕ್ತಿ ಕಾಯ್ದು ಪಕ್ಷವನ್ನು ಮುನ್ನಡೆಸುವುದು ಈಗ ಎಐಸಿಸಿ ನಾಯಕತ್ವಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Related posts

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor

E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ

Kalpana Editor

ಜಿರಳೆಗಳ ವಿರುದ್ಧ ಲಾಠಿಚಾರ್ಜ್; ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!

Kalpana Editor