20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿವಿದೇಶ

ಫ್ರಾನ್ಸ್‌ನಲ್ಲಿ ಸಣ್ಣ ವಿಮಾನ ಪತನ; 11 ಮಂದಿ ಸಾವು..!

ಪ್ಯಾರಿಸ್ : ಫ್ರಾನ್ಸ್‌ನ ಪೂರ್ವ ಭಾಗದ ಟೊಂಬ್ಲೇನ್ ನಗರದಲ್ಲಿ ಭಾನುವಾರ ಬೆಳಗ್ಗೆ ಭೀಕರ ವಿಮಾನ ದುರಂತ ಸಂಭವಿಸಿದ್ದು, ಸಣ್ಣ ನಾಗರಿಕ ವಿಮಾನ ಪತನಗೊಂಡ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. ನ್ಯಾನ್ಸಿ-ಎಸ್ಸೆ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ್ದ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಹಾಗೂ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಈ ಘಟನೆ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ವೈದ್ಯಕೀಯ ತುರ್ತು ಸೇವೆಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಮಿಯರ್ಥ್-ಎ-ಮೊಸೆಲ್ ಪ್ರಾಂತ್ಯದ ಪ್ರಿಫೆಕ್ಟ್ ಇವ್ಸ್ ಸೆಗಿಟ್ ಅವರ ನೇತೃತ್ವದಲ್ಲಿ ಇಲಾಖೆಯ ಕಾರ್ಯಾಚರಣಾ ಕೇಂದ್ರ ಸಕ್ರಿಯಗೊಳಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.

ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗದಂತೆ ಸಾಲ್ವಡೋರ್ ಅಲೆಂಡೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಸಾರ್ವಜನಿಕರು ತೆರಳದಂತೆ ಪೊಲೀಸರು ಮನವಿ ಮಾಡಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಬೇರೆ ಕಾರಣವೇ ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಅಧಿಕಾರಿಗಳು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ : ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌, ಬಾಯಿ ಚಪ್ಪರಿಸಿ ತಿಂದ ಸಿದ್ದರಾಮಯ್ಯ

Related posts

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Kalpana Editor

ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’

Kalpana Editor

ಪರಿಷತ್‌ ಚುನಾವಣೆ; ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ..!

Kalpana Editor