26.6 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ – ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ವಲಸಿಗರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ಬಗ್ಗೆ ಟೀಕಿಸುವುದು ನಿಲ್ಲಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂತಹ “ವಿಜಿಲಾಂಟಿಸಂ” ಅಥವಾ “ಮಾರಲ್ ಪೋಲಿಸಿಂಗ್” ಅನ್ನು ಸರ್ಕಾರ ಸಹಿಸುವುದಿಲ್ಲ ಎಂದಿದ್ದಾರೆ. ಮಾಹಿತಿ ಸಂಗ್ರಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರಿಂದ ಅಂತರರಾಷ್ಟ್ರೀಯ ಜಾಲಗಳು ಎಚ್ಚೆತ್ತುಕೊಳ್ಳುತ್ತವೆ ಮತ್ತು ಸರ್ಕಾರದ ರಹಸ್ಯ ಕಾರ್ಯಾಚರಣೆಗಳಿಗೆ ಅಡ್ಡಿಯಾಗುತ್ತದೆ ಎಂದು ಖರ್ಗೆ ತಿಳಿಸಿದರು. ನಿಜವಾದ ದೇಶಭಕ್ತರು ಮತ್ತು ರಾಜ್ಯದ ಹಿತಾಸಕ್ತಿ ಬಯಸುವವರು ಮಾಹಿತಿ ಇದ್ದರೆ ಅದನ್ನು ನೇರವಾಗಿ ಪೊಲೀಸರಿಗೆ ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು.

ಸರ್ಕಾರವು ಈಗಾಗಲೇ ಬಾಂಗ್ಲಾದೇಶ ಮತ್ತು ಆಫ್ರಿಕಾ ಸೇರಿದಂತೆ ವಿವಿಧ ಕಡೆಯಿಂದ ಬಂದಿರುವ ಸುಮಾರು 1000 ವಲಸಿಗರನ್ನು ಕಳೆದ ಮೂರು ತಿಂಗಳಲ್ಲಿ ಪತ್ತೆ ಹಚ್ಚಿ ಎಫ್‌ಆರ್‌ಒಗೆ ಹಸ್ತಾಂತರಿಸಿದೆ. ಬಿಎಸ್‌ಎಫ್ ಮತ್ತು ಎಫ್‌ಆರ್‌ಒ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸರ್ಕಾರ ಈ ವಿಚಾರದಲ್ಲಿ ಶೇ.100ರಷ್ಟು ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಖರ್ಗೆ ಹೇಳಿದ್ದಾರೆ. ಇಂತಹ ಪ್ರಚಾರದ ಕೃತ್ಯಗಳಿಂದ ಭದ್ರತೆಗೆ ಧಕ್ಕೆ ಉಂಟಾಗುತ್ತದೆ ಎಂದು ಅವರು ಎಚ್ಚರಿಸಿದರು. ಇದನ್ನೂ ಓದಿ : ಹೋಟೆಲ್‌ಗಳ ಮೇಲೆ ಮುಂದುವರೆದ ಫುಡ್ ಸೇಫ್ಟಿ ರೇಡ್; ರೆಸ್ಟೋರೆಂಟ್‌ಗಳಿಗೆ ನೋಟಿಸ್..!

Related posts

ಕುರುಡುಮಲೆ ವಿನಾಯಕ ದೇವಾಲಯಕ್ಕೆ ಬಿಎಸ್‌ವೈ ಕುಟುಂಬ ಭೇಟಿ; ವಿಶೇಷ ಪೂಜೆ ಸಲ್ಲಿಕೆ..!

Kalpana Editor

“ಕರುಪ್ಪು” ಸಿನೆಮಾದಲ್ಲಿ ತ್ರಿಷಾ ಜೊತೆ ನಟಿಸುವ ಆಫರ್ ಸಿಕ್ಕಿದ್ರೂ ದಳಪತಿ ನಿರಾಕರಿಸಿದ್ದೇಕೆ..?

Kalpana Editor

ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ; ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪ್ರತಿಭಟನೆ..!

Kalpana Editor