kranthikidi.com
ತಾಜಾಸುದ್ದಿರಾಜಕೀಯರಾಜ್ಯ

ತಮಿಳುನಾಡು ಸಿಎಂ ವಿಜಯ್‌ಗೆ ಪತ್ರ ಬರೆದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು : ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. “ಕಾವೇರಿ ನದಿ ಉಭಯ ರಾಜ್ಯಗಳ ಜನರನ್ನು ಬೆಸೆಯುವ ಕೊಂಡಿಯಾಗಬೇಕೇ ವಿನಃ ವಿಭಜಿಸುವ ಶಕ್ತಿಯಾಗಬಾರದು” ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದ ಬೆನ್ನಲ್ಲೇ ಎರಡೂ ರಾಜ್ಯಗಳ ನಡುವೆ ರಾಜಕೀಯ ಮತ್ತು ಕಾನೂನು ಸಮರ ತೀವ್ರಗೊಂಡಿದೆ. ಈ ವಾತಾವರಣದ ನಡುವೆ ವಿಜಯೇಂದ್ರ ಅವರು ತಮಿಳುನಾಡು ಸಿಎಂಗೆ ರಾಜತಾಂತ್ರಿಕ ಹಾಗೂ ಸೌಹಾರ್ದಯುತ ಹಾದಿ ತುಳಿಯುವಂತೆ ಮನವಿ ಮಾಡಿದ್ದಾರೆ.

ನೆರೆಹೊರೆಯ ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ, ಅವುಗಳನ್ನು ರಾಜಕೀಯ ಪಕ್ವತೆ ಮತ್ತು ಮುಕ್ತ ಸಂವಾದದ ಮೂಲಕ ಬಗೆಹರಿಸಿಕೊಳ್ಳುವುದು ಮುಖ್ಯ ಎಂದು ವಿಜಯೇಂದ್ರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಿಂದೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಹಾಗೂ ತಮಿಳುನಾಡಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಎಂ. ಕರುಣಾನಿಧಿ ಅವರು ತೋರಿಸಿದ ರಾಜಕೀಯ ಪಕ್ವತೆಯನ್ನು ವಿಜಯೇಂದ್ರ ನೆನಪಿಸಿದ್ದಾರೆ.

ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಕೋಟ್ಯಂತರ ಕನ್ನಡಿಗರು ಮತ್ತು ತಮಿಳರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮೇಕೆದಾಟು ಯೋಜನೆ ಅತ್ಯಗತ್ಯ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದಿಂದ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ನೀರಿನ ಪಾಲಿಗೆ ಯಾವುದೇ ಧಕ್ಕೆಯಾಗುವುದಿಲ್ಲ.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈ ಯೋಜನೆ ನೆರವಾಗಲಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದರೆ ಅದು ಎರಡೂ ರಾಜ್ಯಗಳ ನಡುವಿನ ಸಹಕಾರಕ್ಕೆ ದೊಡ್ಡ ಸಂಕೇತವಾಗಲಿದೆ, ಎಂದು ವಿಜಯೇಂದ್ರ ಪತ್ರದಲ್ಲಿ ತಿಳಿಸಿದ್ದಾರೆ. ಪ್ರಕೃತಿಯ ವಿಕೋಪ ಹಾಗೂ ಮುಂಗಾರು ಅಭಾವದಿಂದಾಗಿ ಎರಡೂ ರಾಜ್ಯಗಳ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಂತದಲ್ಲಿ ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕದ ಹಿತಾಸಕ್ತಿಯನ್ನು ಗೌರವಿಸುತ್ತಲೇ ತಮಿಳುನಾಡಿನ ಹಿತ ಕಾಯುವ ಪಕ್ವ ನಿಲುವು ತಳೆಯಬೇಕು ಎಂದು ವಿಜಯೇಂದ್ರ ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಶ್ವಾಸಕೋಶದ ಆರೋಗ್ಯ ಹದಗೆಡುವುದಕ್ಕೆ, ದೈನಂದಿನ ಅಭ್ಯಾಸಗಳೇ ಕಾರಣ..!

Related posts

ಎಸ್‍ಐಆರ್ ವಿಷಯದಲ್ಲಿ ಅಧಿಕಾರಿಗಳ ದುರ್ಬಳಕೆಗೆ, ಕೋರ್ ಕಮಿಟಿ ಸಭೆ ಆಕ್ಷೇಪ – ಬಿ.ವೈ.ವಿಜಯೇಂದ್ರ

Kalpana Editor

ಅಜ್ಜಯ್ಯನ ಗದ್ದುಗೆಗೆ ಡಿಕೆಶಿ ಭೇಟಿ; ಪದಗ್ರಹಣಕ್ಕೂ ಮುನ್ನ ಸಲಹೆ, ಎಚ್ಚರಿಕೆ..!

Kalpana Editor

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತಾ ಲೋಪ; ಚಿನ್ನ, ಅಮೂಲ್ಯ ವಜ್ರಾಭರಣ ನಾಪತ್ತೆ..!

Kalpana Editor