20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು..!

ರಾಯಚೂರು : ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಎಂದು ಗುರುತಿಸಲಾಗಿದೆ.

ನಿದ್ದೆಯಿಂದ ಎದ್ದು ಹೊರಗಡೆ ಬಂದಿದ್ದ ಮಗು ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಬರಗಾಲಕ್ಕೂ ರಾಜಕೀಯಕ್ಕೂ ನಂಟುಬೇಡ; ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ” ಪ್ರತಿಪಕ್ಷಗಳ ರಾಜಕೀಯ ಪ್ರೇರಿತ ಟೀಕೆಗಳಿಗೆ ತಿರುಗೇಟು – ಎನ್. ಚಲುವರಾಯಸ್ವಾಮಿ

Related posts

ಆನ್-ಸ್ಕ್ರೀನ್ ಮಾರ್ಕಿಂಗ್ ವಿವಾದ; ಹೊಣೆ ಹೊತ್ತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

Kalpana Editor

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ತೀವ್ರ ವಿವಾದ..!

kknewskannada1987@gmail.com

ಸಿಎಂ ಆದ ಬಳಿಕ ಅಜ್ಜಯ್ಯನ ಮಠಕ್ಕೆ ಭೇಟಿ; ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದ್ದ ಡಿಕೆಶಿ

Kalpana Editor