August 27, 2026
kranthikidi.com
ತಾಜಾಸುದ್ದಿರಾಜ್ಯ

ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

ಬೆಂಗಳೂರು : ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ. ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯಲ್ಲಿಯೂ ಕೇಂದ್ರ ಪಾಲಿಕೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿರ್ಮಾಣ ಸಾಮಗ್ರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಲಾಗಿದೆ.

ಪಾದಚಾರಿ ಮಾರ್ಗದಲ್ಲಿ ಯಾವುದೇ ರೀತಿಯ ಕಟ್ಟಡ ಸಾಮಗ್ರಿಗಳನ್ನು ಅಥವಾ ಅಂಗಡಿಗಳನ್ನು ಇಡುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಆದರೆ, ಈ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನಗೊಂಡಿದ್ದಾರೆ. ಬಿಬಿಎಂಪಿ ಈ ಹಿಂದೆ ಕೊಟ್ಟಿದ್ದ ಗುರುತಿನ ಚೀಟಿ ಪಡೆದು ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ತಮ್ಮನ್ನು ಈಗ ತೆರವು ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮಗೆ ಗುರುತಿನ ಚೀಟಿ ಕೊಟ್ಟವರೇ ಈಗ ನಮ್ಮ ಅಂಗಡಿಗಳನ್ನು ತೆರವು ಮಾಡುತ್ತಿದ್ದಾರೆ. ನಾವು ಎಲ್ಲಿಗೆ ಹೋಗಿ ವ್ಯಾಪಾರ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ಪಾದಚಾರಿಗಳಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ..!

Related posts

ಆಫ್ರಿಕಾದ ಚೀತಾಗಳು ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ಲಭ್ಯ..!

Kalpana Editor

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್…!

Kalpana Editor

ಆರ್‌ಎಸ್‌ಎಸ್‌ಗೆ ಬಿಗ್​​ ಶಾಕ್​​ ಕೊಟ್ಟ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ

Kalpana Editor