22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!

ಬೆಂಗಳೂರು : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ಘೋಷಣೆಗಳನ್ನು ಕೂಗಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿದವರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಜೊತೆಗೆ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ, ದೇಶಾದ್ಯಂತ ವಿದ್ಯಾರ್ಥಿಗಳ ಧ್ವನಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸ ಮರುಸ್ಥಾಪಿಸಲು ಸಮಗ್ರ ಸುಧಾರಣೆ ಅಗತ್ಯವೆಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ : ರಾಹುಲ್‌ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್‌ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ..!

Related posts

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ; ಚಿನ್ನದ ಪಲ್ಲಕ್ಕಿ, ವಿಶೇಷ ಪೂಜೆ ಸಲ್ಲಿಕೆ..!

Kalpana Editor

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನಗಳ ಕಾಲ ಇಡಿ ಕಸ್ಟಡಿಗೆ..!

kknewskannada1987@gmail.com

ಹಾಸನದಲ್ಲಿ ಮಳೆಯಬ್ಬರ – ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ..!

Kalpana Editor