22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ; ಬೆಂಬಲಿಗರಿಂದ ಬಾಗೇಪಲ್ಲಿ ಬಂದ್, ಪ್ರತಿಭಟನೆ..!

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಸುಬ್ಬಾರೆಡ್ಡಿ ಬೆಂಬಲಿಗರು ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಿದ್ದಾರೆ.

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಬಾಗೇಪಲ್ಲಿ ಪಟ್ಟಣದಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ಆರಂಭಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿ ಮುಖ್ಯರಸ್ತೆ ತಡೆ ನಡೆಸಿದರು. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿರುವ ಬೆಂಬಲಿಗರು, ಸರ್ಕಾರ ತಮ್ಮ ಬೇಡಿಕೆಯನ್ನು ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

Related posts

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ; ಸಿಎಂ ಡಿಕೆ ಶಿವಕುಮಾರ್

Kalpana Editor

ಚೀನಾಗೆ ಟಕ್ಕರ್‌; ಭಾರತದ ನಕ್ಷೆಗೆ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಸೇರ್ಪಡೆ..!

kknewskannada1987@gmail.com

ಚೆನ್ನಮ್ಮ ಅಂತಿಮ ದರ್ಶನ ಪಡೆದ ದುನಿಯಾ ವಿಜಯ್, ದೊಡ್ಡಣ್ಣ, ಡಾಲಿ, ನಟಿ ಪೂಜಾಗಾಂಧಿ

Kalpana Editor