August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ; ಬಿಜೆಪಿ ಹೈಕಮಾಂಡ್ ನಡೆ ಕುತೂಹಲ..!

ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​​ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡರನ್ನೆ ಮುಂದುವರೆಸಬೇಕೆಂದು ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ.

ಮೊನ್ನೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೆಲವರ ಹೆಸರುಗಳು ಪ್ರಸ್ತಾಪವಾಗಿದೆ. ಹೀಗಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಆದರೂ ಸಂಪ್ರದಾಯದಂತೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಹೆಸರು ಶಿಫಾರಸ್ಸು ಮಾಡಲಾಗಿದೆ. ಈ ಎಲ್ಲಾ ವಿದ್ಯಾಮಾನಗಳ ನಡುವೆ ಅಚ್ಚರಿ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ಹೈಕಮಾಂಡ್, ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಬಗ್ಗೆ ವಿವರ ಕೇಳಿದ್ದು, ಸಂಚಲನದ ಜೊತೆ ಕುತೂಹಲ ಮೂಡಿಸಿದೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಸಂಬಂಧ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದರ ಮಧ್ಯೆ ರಾಜ್ಯ ಬಿಜೆಪಿ ಸಹ ಕೇಂದ್ರೀಯ ಸಂಸದೀಯ ಮಂಡಳಿಗೆ ಸದಾನಂದಗೌಡ ಹೆಸರು ಶಿಫಾರಸು ಮಾಡಿದೆ. ಆದ್ರೆ, ಹೈಕಮಾಂಡ್ ಮಟ್ಟದಲ್ಲಿ ಸುಮಲತಾ ಹೆಸರು ಮುನ್ನಲೆಗೆ ಬಂದಿದ್ದು, ರಾಜ್ಯ ನಾಯಕರಿಂದ ಸುಮಲತಾ ರಾಜಕೀಯ ಪ್ರಭಾವದ ಕುರಿತು ವಿವರಣೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಹಾಲಿ ಮಂಡ್ಯದ ಪಕ್ಷೇತರ ಸಂಸದೆಯಾಗಿದ್ದ ಸುಮಲತಾ ಅಂಬರೀಶ್ ಅವರು ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನು ಜೆಡಿಎಸ್​​​ಗೆ ತ್ಯಾಗ ಮಾಡಿದ್ದರು. ಇದರ ಫಲವಾಗಿ ಎಚ್​​​ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆದ್ದು ಇದೀಗ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂದು ಸುಮಲತಾ ಮಾಡಿದ ಈ ದೊಡ್ಡ ತ್ಯಾಗವನ್ನು ಬಿಜೆಪಿ ವರಿಷ್ಠರು ಇದೀಗ ಗಣನೆಗೆ ತೆಗೆದುಕೊಂಡಿದ್ದು, ರಾಜ್ಯಸಭೆಯ ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್ ಅಚ್ಚರಿ ಆಯ್ಕೆಯಲ್ಲಿ ಖ್ಯಾತ ಪಡೆದುಕೊಂಡಿದೆ. ಹೀಗಾಗಿ ಕರ್ನಾಟಕ ರಾಜ್ಯಸಭೆಗೆ ಸುಮಲತಾ ಅಂಬರೀಶ್ ಅಚ್ಚರಿ ಆಯ್ಕೆಯಾಗುತ್ತಾರಾ ಎನ್ನುವುದೇ ಕುತೂಹಲಕಾರಿಯಾಗಿದೆ.

Related posts

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್..!

Kalpana Editor

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ – ವಿಜಯೇಂದ್ರ

Kalpana Editor

ಪೆಟ್ರೋಲ್‌ ಟ್ಯಾಂಕ್‌ಗೆ ನೀರು ಹಾಕಿ ಎಥೆನಾಲ್‌ ವಿರುದ್ಧ ಅಪಪ್ರಚಾರ; ಯೂಟ್ಯೂಬರ್‌ ವಿರುದ್ಧ ಟೊಯೋಟಾ ಎಫ್‌ಐಆರ್‌

Kalpana Editor