23 C
ಬೆಂಗಳೂರು
August 6, 2026
kranthikidi.com
ತಾಜಾಸುದ್ದಿದೇಶ

ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ಪಣಜಿ : 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಂಬೆ ಹೈಕೋರ್ಟ್‌ನ ಗೋವಾ ಪೀಠದ ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಮತ್ತು ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿ ಇಂದು ಬೆಳಗ್ಗೆ ದೋಷಿ ಎಂದು ತೀರ್ಪು ನೀಡಿತ್ತು.

ವಿಚಾರಣಾ ನ್ಯಾಯಾಲಯವು ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ಇಂದು ಬೆಳಗ್ಗೆ ವಜಾಗೊಳಿಸಿದ್ದ ಹೈಕೋರ್ಟ್‌ ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು. ಕೋರ್ಟ್‌ 10 ವರ್ಷ ಜೈಲು ಶಿಕೆಯ ಜೊತೆ 5 ಲಕ್ಷ ರೂ. ದಂಡವನ್ನು ವಿಧಿಸಿ 2 ವಾರಗಳ ಒಳಗಡೆ ಪೊಲೀಸರಿಗೆ ಶರಣಾಗಬೇಕು ಎಂದು ಸೂಚಿಸಿದೆ.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376(2)(f), 376(2)(k) (ಅತ್ಯಾಚಾರ) ಹಾಗೂ ಸೆಕ್ಷನ್ 354A, 354B (ಲೈಂಗಿಕ ಕಿರುಕುಳ) ಅಡಿಯಲ್ಲಿ 62 ವರ್ಷದ ತೇಜ್‌ಪಾಲ್ ದೋಷಿ ಎಂದು ನ್ಯಾಯಪೀಠ ತೀರ್ಮಾನಿಸಿದೆ. ಇದನ್ನೂ ಓದಿ : ಬರಲು ನಮಗೆ ಸಮಯವಿಲ್ಲ; ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!

Related posts

ಶತಾವಧಾನಿ ಗಣೇಶ್, ಅಂಕೇಗೌಡ ಸೇರಿ 66 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ..!

Kalpana Editor

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ; ಸಸಿ ನೆಡುವ ಬೃಹತ್ ಅಭಿಯಾನ..!

Kalpana Editor

ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ..!

Kalpana Editor