22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಮೂವರ ದುರ್ಮರಣ..!

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್​ನಲ್ಲಿ ಬಂದ ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಕಂದಮ್ಮ ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗುವಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್‌ನಲ್ಲಿ ರಾಯಬಾಗ ಪಟ್ಟಣಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್‌ಗೆ ನೇರವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ ಮೂವರು ಅಸುನೀಗಿರುವುದಕ್ಕೆ ಬೊಮ್ಮನಾಳ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Related posts

ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌..!

kknewskannada1987@gmail.com

ನಾಗರ ಪಂಚಮಿ ಹಬ್ಬದಕ್ಕೆ ಅರಿಶಿನ ಎಲೆ ಕಡುಬು

kknewskannada1987@gmail.com

ಸಿಎಂ ಡಿ.ಕೆ.ಶಿ. ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ – ಬಸವರಾಜ ಬೊಮ್ಮಾಯಿ

Kalpana Editor