ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಬೆಂಗಳೂರಿನಿಂದ ಹೊಳೆನರಸೀಪುರದ ವರೆಗೆ ನಡೆಯಲಿದೆ. ಅಂತಿಮ ಯಾತ್ರೆ ಮಾರ್ಗ ಮಧ್ಯೆ 10 ಕಡೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಅಂತಿಮ ಯಾತ್ರೆ ಹೊರಡಿತ್ತು.
ಅಂತಿಮ ಯಾತ್ರೆ ಸಾಗುವ ಮಾರ್ಗ – ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಎಲೆಯೂರು (ಉದಯಪುರ), ಶಾಂತಿಗ್ರಾಮ, ಬೂವನಹಳ್ಳಿ ಕ್ರಾಸ್, ಹಾಸನ ಡೈರಿ ಸರ್ಕಲ್, ಎನ್ ಆರ್ ಸರ್ಕಲ್, ಮೊಸಳೆ ಹೊಸಹಳ್ಳಿ..,
ರಾತ್ರಿ ಹೊಳೆನರಸೀಪುರದಲ್ಲಿರುವ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತ್ತೆ ಮಾರನೇ ದಿನ (ಜು.20) ಬೆಳಗ್ಗೆ 7:00 ರಿಂದ 9:30 ಗಂಟೆಯವರೆಗೆ ಅಂತಿಮ ದರ್ಶನ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ನಿರ್ಗಮಿಸಿ, ಬೆಳಗ್ಗೆ 11:30ಕ್ಕೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 2 ರಿಂದ ಸಂಜೆ 4:15 ಗಂಟೆವರೆಗೆ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆಯಲಿವೆ ಎಂಬ ಮಾಹಿತಿಗಳು ತಿಳಿದುಬಂದಿದೆ. ಇದನ್ನೂ ಓದಿ : ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಅಳಿಯ ಭಾವುಕ..!
