July 12, 2026
kranthikidi.com
ತಾಜಾಸುದ್ದಿರಾಜ್ಯ

ಹೊಸ ಆಲ್ಕೋಹಾಲ್ ನೀತಿ ಮ್ಯಾಜಿಕ್ – ಬಿಯರ್ ಮಾರಾಟದಲ್ಲಿ ಭಾರಿ ಏರಿಕೆ..!

ಬೆಂಗಳೂರು : ರಾಜ್ಯ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ನೂತನ ‘ಆಲ್ಕೋಹಾಲ್ ಇನ್ ಬಿವರೇಜ್’ ತೆರಿಗೆ ನೀತಿಯು ಅಬಕಾರಿ ಇಲಾಖೆಯ ಖಜಾನೆಯನ್ನು ತುಂಬಿಸುವಲ್ಲಿ ಯಶಸ್ವಿಯಾಗಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ನೂತನ ನೀತಿಯಡಿ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲಾಗುತ್ತಿದ್ದು, ರಾಜ್ಯದ ಮದ್ಯಪ್ರಿಯರ ಕುಡಿಯುವ ಶೈಲಿಯನ್ನೇ ಬದಲಾಯಿಸುತ್ತಿದೆ.

ಹೆಚ್ಚು ತೀವ್ರತೆ ಹೊಂದಿರುವ ಹಾರ್ಡ್ ಲಿಕ್ಕರ್ ಬದಲಿಗೆ ಜನರು ಈಗ ಲಘು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಬಿಯರ್‌ಗಳತ್ತ ಆಕರ್ಷಿತರಾಗುತ್ತಿದ್ದಾರೆ. ಶೇ 5 ಕ್ಕಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆಯಲ್ಲಿ ಭಾರಿ ಕಡಿತವಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312.67 ಕೋಟಿ ರೂ. ಹೆಚ್ಚುವರಿ ಆದಾಯ ಹರಿದುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,602.14 ಕೋಟಿ ರೂ. ಆದಾಯ ಬಂದಿದ್ದರೆ, ಈ ಬಾರಿ ದಾಖಲೆಯ 1,914.81 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಅದೇ ರೀತಿ ಭಾರತೀಯ ಮದ್ಯ ಮಾರಾಟವೂ ಚುರುಕಾಗಿದ್ದು, ಕಳೆದ ವರ್ಷದ 7,407.53 ಕೋಟಿ ರೂ.ಗೆ ಹೋಲಿಸಿದರೆ ಈ ಬಾರಿ 8,394.32 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಒಟ್ಟಾರೆಯಾಗಿ ಮೊದಲ ತ್ರೈಮಾಸಿಕದಲ್ಲಿ ಅಬಕಾರಿ ಇಲಾಖೆಯು ಕಳೆದ ವರ್ಷಕ್ಕಿಂತ ಶೇ 14.39 ರಷ್ಟು ಬೆಳವಣಿಗೆಯೊಂದಿಗೆ ಒಟ್ಟು 10,599.29 ಕೋಟಿ ರೂ. ರಾಜಸ್ವ ಸಂಗ್ರಹ ಮಾಡಿದೆ.

ಹೊಸ ತೆರಿಗೆ ನೀತಿಯಿಂದಾಗಿ ಪ್ರೀಮಿಯಂ ಲಾಗರ್ ಬಿಯರ್‌ಗಳು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿವೆ. ಉದಾಹರಣೆಗೆ, ಯುನೈಟೆಡ್ ಬ್ರೂವರೀಸ್ (UB) ನ ಕಿಂಗ್‌ಫಿಷರ್ ಪ್ರೀಮಿಯಂನ 330 ಎಂಎಲ್ ಬಾಟಲಿ ಬೆಲೆ 125 ರೂ.ನಿಂದ ನೇರವಾಗಿ 60 ರೂ.ಗೆ ಇಳಿಕೆಯಾಗಿದೆ. ಇದರೊಂದಿಗೆ ಬಡ್‌ವೈಸರ್, ಕೊರೊನಾ, ಹೊಗಾರ್ಡನ್ ಹಾಗೂ ಬೆಂಗಳೂರಿನ ಸ್ಥಳೀಯ ಬ್ರ್ಯಾಂಡ್ ಆದ ಟೋಯ್ಟ್ (Toit) ಬಿಯರ್‌ಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ.

ಬೇಸಿಗೆಯ ಗರಿಷ್ಠ ಅವಧಿಯಲ್ಲೇ ಬೆಲೆ ಇಳಿಕೆಯಾಗಿದ್ದರಿಂದ ಕಳೆದ ಒಂದೂವರೆ ತಿಂಗಳಲ್ಲಿ ಬಿಯರ್ ಇನ್ವೆಂಟರಿ ಶೇ 25-30 ರಷ್ಟು ಹೆಚ್ಚಾಗಿದೆ ಎಂದು ವ್ಯಾಪಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಹಕರಲ್ಲಿ ಗುಣಮಟ್ಟದ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳನ್ನು ಉತ್ತೇಜಿಸುವುದೇ AIB ನೀತಿಯ ಮುಖ್ಯ ಉದ್ದೇಶ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸರ್ಕಾರವು 2026-27ರ ಹಣಕಾಸು ವರ್ಷಕ್ಕೆ ಒಟ್ಟು 45,000 ಕೋಟಿ ರೂ. ಅಬಕಾರಿ ಆದಾಯದ ಗುರಿಯನ್ನು ಹೊಂದಿದ್ದು, ಇದನ್ನು ತಲುಪಲು IML ತಯಾರಕರು ತಮ್ಮ ಮದ್ಯದಲ್ಲಿ ಕನಿಷ್ಠ ಶೇ 40 ರಷ್ಟು ಆಲ್ಕೋಹಾಲ್ ಪ್ರಮಾಣವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವಂತೆ ಸೂಚಿಸಿದೆ (ವೋಡ್ಕಾಗೆ ಶೇ. 37.5 ವಿನಾಯಿತಿ ಇದೆ).

ಇದರೊಂದಿಗೆ, ಬಳಕೆಯಾಗದ ಹಾಗೂ ರದ್ದಾಗಿರುವ 483 ಸಿಎಲ್-2ಎ (ಚಿಲ್ಲರೆ ಮದ್ಯದ ಅಂಗಡಿ) ಮತ್ತು 96 ಸಿಎಲ್-9ಎ (ಬಾರ್) ಪರವಾನಗಿಗಳನ್ನು ಈ ತಿಂಗಳ ಕೊನೆಯ ವಾರದಲ್ಲಿ ಆನ್‌ಲೈನ್ ಹರಾಜು ಪ್ರಕ್ರಿಯೆಯ ಮೂಲಕ ವಿಲೇವಾರಿ ಮಾಡಿ ಮತ್ತಷ್ಟು ಆದಾಯ ಗಳಿಸಲು ಅಬಕಾರಿ ಇಲಾಖೆ ಮುಂದಾಗಿದೆ. ಈ ಲೈಸೆನ್ಸ್‌ಗಳನ್ನು 2026-27 ರಿಂದ 2030-31ರ ವರೆಗಿನ ಐದು ವರ್ಷಗಳ ಅವಧಿಗೆ ನೀಡಲಾಗುತ್ತದೆ. ಇದನ್ನೂ ಓದಿ : We Want Sanju – ಆಟಗಾರರ ಮುಂದೆ ಆಕ್ರೋಶ ಹೊರಹಾಕಿದ ಅಭಿಮಾನಿಗಳು

Related posts

ಜೂ.12 ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ..!

Kalpana Editor

ರಾಜ್ಯದಲ್ಲಿ ಮುಂಗಾರು ಅಬ್ಬರ; 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ..!

Kalpana Editor

ಇಂದಿನಿಂದ ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ..!

Kalpana Editor