ದಾವಣಗೆರೆ : ತುಂಗಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದ್ದು, ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿರುವ ಹರಿಹರದ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾ ಡ್ಯಾಮ್‌ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. 92,000 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಸ್ನಾನಘಟ್ಟದ ಪಕ್ಕದಲ್ಲಿರುವ 20ಕ್ಕೂ ಹೆಚ್ಚು ಅಂಗಡಿಗಳು ಮುಳುಗಡೆಯಾಗಿವೆ. ನದಿಪಾತ್ರದಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನಲೆ ಅಂಗಡಿಗಳನ್ನು ಸ್ಥಳಾಂತರ ಮಾಡಲಾಗಿದೆ. ದಾವಣಗೆರೆಯಲ್ಲಿ ಮಳೆಯಾಗುತ್ತಿಲ್ಲ, ಆದರೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿ ಮೈದುಂಬಿ ಹರಿಯುತ್ತಿದೆ. ನದಿಪಾತ್ರಕ್ಕೆ ಭಕ್ತರು ಹೋಗದಂತೆ ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ : ಗನ್, ಲಾಂಗ್ ತೋರಿಸಿ ಬೆದರಿಕೆ – ಟೋಲ್‌ನಲ್ಲಿ ಸುಂಕ ಕಟ್ಟದೆ ಕಾರು ಗುದ್ದಿಸಿಕೊಂಡು ಹೋದ ಪುಂಡರು..!
