21.5 C
ಬೆಂಗಳೂರು
September 22, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ರಾತ್ರೋರಾತ್ರಿ ಲೇಡಿಸ್‌ ಪಿಜಿಗೆ ನುಗ್ಗಿದ ಕಳ್ಳ; ಕೈಗೆ ಸಿಕ್ಕ ವಸ್ತುಗಳನ್ನು ಕದ್ದು ಪರಾರಿ..!

ಬೆಂಗಳೂರು : ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಬೆಳಗಿನ ಜಾವ 3.30ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಬಳಿಯ ಎಸ್‌ಜಿ ಪಾಳ್ಯದಲ್ಲಿ ಮಹಿಳೆಯರ ಪಿಜಿಯಲ್ಲಿ ನಡೆದಿದ್ದು, ಬೆಳಕಿಗೆ ಬಂದಿದೆ.

ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯ ದ್ವಾರದ ಮೂಲಕ ಪಿಜಿಯೊಳಗೆ ಪ್ರವೇಶಿಸಿದ್ದಾನೆ. ಪಿಜಿಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳ, ಅಲ್ಲಿದ್ದ ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ವಿಷಯ ತಿಳಿಯುತ್ತಿದ್ದಂತೆ ಪಿಜಿ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ಎಸ್‌.ಜಿ. ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳ ಆಧಾರದಲ್ಲಿ ಕಳ್ಳನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ : ಎರಡು ಪ್ರಮುಖ ಮ್ಯೂಸಿಕ್ ಕಂಪನಿಗಳು ನನ್ನ ಬ್ಯಾನ್ ಮಾಡಿದ್ದವು; ಸೋನು ನಿಗಮ್

Related posts

ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ ತಂದೆ-ಮಗ; ಕೊಡಗಿನ ರೆಸಾರ್ಟ್‌ನಲ್ಲಿ ಜಾಲಿ..!

Kalpana Editor

ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ – ಪ್ರಿಯಾಂಕ್ ಖರ್ಗೆ

kknewskannada1987@gmail.com

RCB ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣವಿಲ್ಲ: ಫೇಕ್ ಪೋಸ್ಟ್‌ ವಿರುದ್ಧ BMRCL ಎಚ್ಚರಿಕೆ..!

Kalpana Editor