August 1, 2026
kranthikidi.com
ತಾಜಾಸುದ್ದಿರಾಜ್ಯ

ಕೆರೆಗೆ ಈಜಲು ಹೋಗಿದ್ದ, ಮೂವರು ಬಾಲಕರು ನೀರುಪಾಲು..!

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಭಾನಿ ಬಾಬೊಜಿಕೊಪ್ಪ (12), ಮೆಹಬೂಬ ಒಟ್ನಾಳ (16), ಅನ್ವರ್ ಒಟ್ನಾಳ (14) ಸಾವನ್ನಪ್ಪಿದ ಬಾಲಕರು.

ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೂವರು ಬಾಲಕರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆತ..!

Kalpana Editor

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ, ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮೊಮ್ಮಗ; ಅಜ್ಜಿ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ..?

Kalpana Editor

ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ – ಎನ್‌ಟಿಎಗೆ ಸುಪ್ರೀಂಕೋರ್ಟ್ ತರಾಟೆ..!

Kalpana Editor