20.8 C
ಬೆಂಗಳೂರು
September 22, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ 3 ಸಜಾ ಕೈದಿಗಳು ಜೈಲಿನಿಂದ ಪರಾರಿ..! ‌

ಕಲಬುರಗಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ.

ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್‌ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.3 ರಂದು ಸಹ ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ : ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!

Related posts

ಪರ್ಯಾಯ SIR​ಗೆ ಆದೇಶಿಸಿದ್ದ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್..!

Kalpana Editor

19 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್‌ – ಗುಡುಗು ಸಿಡಿಲಿನ ಆರ್ಭಟವೂ ಜೋರು..!

Kalpana Editor

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ – ಸಿಎಂ ಡಿಕೆ ಶಿವಕುಮಾರ್

Kalpana Editor