21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ..!

ಚಾಮರಾಜನಗರ : ಕಾವೇರಿ ವನ್ಯಜೀವಿ ವಿಭಾಗದ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.

ಹನೂರು ವನ್ಯಜೀವಿ ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟ ಗಸ್ತಿನ ಕರದಿಕಲ್ಲು ಒಡ್ಡು ಎಂಬ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನೊಳಗೆ ಅಕ್ರಮವಾಗಿ ನುಗ್ಗಿದ್ದ ನಾಡಬಂದೂಕುಧಾರಿಗಳು ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗಾಗಿ ನಡೆಸಿದ ಪ್ರತಿದಾಳಿಯಲ್ಲಿ ಮೂವರಿಗೆ ಗುಂಡು ತಗುಲಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ನೈಜ ಹಿನ್ನೆಲೆ, ಬಳಸಲಾದ ಆಯುಧಗಳು ಮತ್ತು ಸಿಬ್ಬಂದಿ ತೆಗೆದುಕೊಂಡ ಕ್ರಮಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಾಸ್ತವಾಂಶಗಳನ್ನು ಒಳಗೊಂಡ ವರದಿಯನ್ನು 7 ದಿನಗಳ ಒಳಗೆ ಪೂರ್ಣಗೊಳಿಸಿ ಸಲ್ಲಿಸುವಂತೆ ತನಿಖಾಧಿಕಾರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಇದನ್ನೂ ಓದಿ : 15,000 ರೂ. ಲಾಭ, ಖುಷಿಯಲ್ಲಿ 75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ..!

Related posts

ಕೇಂದ್ರ ಸರ್ಕಾರಿ ಉದ್ಯೋಗವಕಾಶ; 389 ಹುದ್ದೆಗಳಿಗೆ ಅರ್ಜಿ ಆಹ್ವಾನ..!

kknewskannada1987@gmail.com

ಕುರುಡುಮಲೆ ವಿನಾಯಕ ದೇವಾಲಯಕ್ಕೆ ಬಿಎಸ್‌ವೈ ಕುಟುಂಬ ಭೇಟಿ; ವಿಶೇಷ ಪೂಜೆ ಸಲ್ಲಿಕೆ..!

Kalpana Editor

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆ..!

kknewskannada1987@gmail.com