23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಚಾ.ನಗರದಲ್ಲಿ ಮೂವರು ತಮಿಳಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ; ತಮಿಳುನಾಡು ಸಿಎಂ ಖಂಡನೆ..!

ಚೆನ್ನೈ : ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಗಳು ಮೂವರು ತಮಿಳಿಗರಿಗೆ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ವಿಜಯ್, ‘ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಳ್ಳಿಗಳಲ್ಲಿ ವಾಸಿಸುತ್ತಿದ್ದ, ತಮಿಳರಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಆಗಸ್ಟ್ 15 ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಕೊಂದರು. ಈ ಹತ್ಯಾಕಾಂಡವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ. ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕರ್ನಾಟಕ ಸರ್ಕಾರವು ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಬೇಕು ಎಂದು ಸಿಎಂ ವಿಜಯ್ ಆಗ್ರಹಿಸಿದ್ದಾರೆ. ಶಂಕಿತ ಬೇಟೆಗಾರರು ವನ್ಯಜೀವಿಗಳನ್ನು ಬೇಟೆಯಾಡಲು ಕಾಡಿಗೆ ಪ್ರವೇಶಿಸಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಆ ಪ್ರದೇಶಕ್ಕೆ ಧಾವಿಸಿದ್ದರು.

ಬೇಟೆಗಾರರು ಅರಣ್ಯ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದರು. ಇದಕ್ಕೆ ಪ್ರತಿಯಾಗಿ ಅರಣ್ಯ ಸಿಬ್ಬಂದಿಯೂ ಪ್ರತಿದಾಳಿ ನಡೆಸಿದರು. ಇದರಿಂದಾಗಿ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಬೇಟೆಗಾರರು ಎಂದು ಶಂಕಿಸಲಾದ ಮೂವರು ಪುರುಷರು ಸಾವನ್ನಪ್ಪಿದರು. ಮೃತರು ಆಂಟನಿ ಸ್ವಾಮಿ, ಪೀಟರ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ : ಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ; ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿ

Related posts

ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಖರ್ಗೆ RSS ವಿರೋಧಿ ಇಲಾಖೆ ಪಡೆಯಲಿ; ಬಿವೈವಿ ವ್ಯಂಗ್ಯ..!

kknewskannada1987@gmail.com

ಡಿಜಿಪಿ ಅನುರಾಗ್ ಧನಕರ್ ಶವವಾಗಿ ಪತ್ತೆ – ಕಚೇರಿಯಲ್ಲೇ ಆತ್ಮಹತ್ಯೆ ಶಂಕೆ..!

Kalpana Editor

ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ; ಸಿಎಂ ಡಿಕೆ ಶಿವಕುಮಾರ್

kknewskannada1987@gmail.com