20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಇಂದು ಆಷಾಢ ಮಾಸದ ಕಡೆಯ ಶುಕ್ರವಾರ; ಚಾಮುಂಡಿ ಬೆಟ್ಟಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರವಾದ ಇಂದು ನಾಡದೇವತೆ ತಾಯಿ ಚಾಮುಂಡೇಶ್ವರಿ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಇಂದು ಕಡೆಯ ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಹರಿದುಬಂದಿದ್ದಾರೆ. ಬ್ರಾಹ್ಮಿ ಮುಹೂರ್ತದಿಂದಲೇ ಕೆಲ ಭಕ್ತರು ರಸ್ತೆ ಮಾರ್ಗವಾಗಿ ಬಂದ್ರೆ, ಇನ್ನೂ ಕೆಲವರು ಮೆಟ್ಟಿಲುಗಳ ಮಾರ್ಗವಾಗಿ ಬಂದು ತಾಯಿ ಚಾಮುಂಡಿಯ ದರ್ಶನ ಪಡೆಯುತ್ತಿದ್ದಾರೆ.

ಕಡೆಯ ಆಷಾಢ ಶುಕ್ರವಾರವಾದ ಇಂದು ತಾಯಿ ಚಾಮುಂಡಿಗೆ ಲಕ್ಷ್ಮಿ ದೇವಿಯ ಅಲಂಕಾರ ಮಾಡಲಾಗಿದೆ. ಇದರೊಂದಿಗೆ ಇಡೀ ದೇವಸ್ಥಾನದ ಒಳಾಂಗಣವನ್ನ ಚೆಂಡು ಹೂ, ವಿವಿಧ ಬಣ್ಣದ ಗುಲಾಬಿ ಸೇರಿದಂತೆ ಬಗೆ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ. ದೇವಸ್ಥಾನದ ಒಳಾಂಗಣ ಕರ್ಪೂರ, ಗಂಧ, ಧೂಪದ ಗಮಲಿನಿಂದ ಕೂಡಿದ್ದು, ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದು, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಭಾರತ ಹಿಂದು ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ಯತೀಂದ್ರ ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾರು, ನಮ್ಮ ಸಂಸ್ಕೃತಿ ಯಾವುದು, ನಮ್ಮ ಧರ್ಮ ಯಾವುದು? ನಾವು ಯಾವುದನ್ನು ಆಚರಣೆ ಮಾಡುತ್ತೇವೆ ಎಂಬುದನ್ನ ಕೇಳಲಿ. ಯತೀಂದ್ರರನ್ನ ಎತ್ತು ಹೊತ್ತ ಸಿದ್ದರಾಮಯ್ಯನವರ ಪತ್ನಿ ಅವರೇ ಮಗನಿಗೆ ಸರಿಯಾದ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿ ಚಾಮುಂಡಿಗೆ ನಾಗಲಕ್ಷ್ಮೀ, 2ನೇ ಶುಕ್ರವಾರ ಹಾಗೂ 3ನೇ ಶುಕ್ರವಾರದಂದು ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಈ ಬಾರಿಯೂ ಲಕ್ಷ್ಮಿ ದೇವಿಯ ಅಲಂಕಾರ ಮಾಡಲಾಗಿದೆ. 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ. ಇದನ್ನೂ ಓದಿ : ವರುಣಾ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದ, ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Related posts

ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

kknewskannada1987@gmail.com

2028ಕ್ಕೂ ಡಿಕೆ ಶಿವಕುಮಾರ್‌ ಸಿಎಂ; ಸಚಿವ ಶಿವರಾಜ್ ತಂಗಡಗಿ ಭವಿಷ್ಯ..!

kknewskannada1987@gmail.com

ಎಸ್.ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿಕೆಶಿ ಕರೆ ಮಾಡಿ ಸಾಂತ್ವನ; ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕೆ ಸೂಚನೆ..!

Kalpana Editor