22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಇಂದು 2ನೇ ಆಷಾಢ ಶುಕ್ರವಾರ; ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

ಮೈಸೂರು : ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ತಾಯಿ ಚಾಮುಂಡಿ ತಾಯಿ ವಿಶೇಷ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ ಎನ್ನಲಾಗಿದೆ.

ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದುಬಂದಿದ್ದಾರೆ. ತಾಯಿ ಚಾಮುಂಡಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ ದೇವಸ್ಥಾನವನ್ನು ವಿವಿಧ ಹೂಗಳ ಮಾಲೆಗಳಿಂದ ಅಲಂಕರಿಸಲಾಗಿದೆ. ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಮಾಡುತ್ತಿದ್ದಾರೆ.

ಇನ್ನು ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿ ಚಾಮುಂಡಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಇಂದು ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ. ಇದನ್ನೂ ಓದಿ : ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ..!

Related posts

ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

Kalpana Editor

ವಿಯೆಟ್ನಾಂ ದ್ವೀಪದಲ್ಲಿ ಭಾರತೀಯ ಪ್ರವಾಸಿಗರಿದ್ದ, ಬೋಟ್‌ ಮುಳುಗಡೆ; 15 ಮಂದಿ ಸಾವು..!

Kalpana Editor

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ..!

Kalpana Editor