21.5 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿಸಿನಿಮಾ

ಟಾಕ್ಸಿಕ್ ಟ್ರೈಲರ್ ಬಿಡುಗಡೆಯ ದಿನಾಂಕ ರಿವೀಲ್; ಹೊಸ ಪೋಸ್ಟರ್ ಮೂಲಕ ಗುಡ್‌ನ್ಯೂಸ್ ನೀಡಿದ ನಟ ಯಶ್

ಟಾಕ್ಸಿಕ್ ಸಿನಿಮಾಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ರಾಕಿಂಗ್ ಸ್ಟಾರ್ ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಮತ್ತೊಂದು ಗುಡ್‌ನ್ಯೂಸ್ ನೀಡಿದ್ದಾರೆ. ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಸ್ಯಾಂಡಲ್‌ವುಡ್‌ನಿಂದ ಹಿಡಿದು ಹಾಲಿವುಡ್‌ವರೆಗೂ ಭಾರೀ ನಿರೀಕ್ಷೆ ಮೂಡಿಸಿದ್ದು, ಇದೀಗ ಟ್ರೈಲರ್ ಬಿಡುಗಡೆಯ ದಿನಾಂಕವೂ ರಿವೀಲ್ ಆಗಿದೆ.

ಚಿತ್ರತಂಡದ ಮಾಹಿತಿಯಂತೆ, ಆಗಸ್ಟ್ 8ರ ಶನಿವಾರ ಟಾಕ್ಸಿಕ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಆದರೆ, ಟ್ರೈಲರ್ ಯಾವ ಸಮಯಕ್ಕೆ ಬಿಡುಗಡೆಯಾಗಲಿದೆ ಎಂಬುದನ್ನು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಇದೇ ವೇಳೆ, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಶ್ ಹೊಸ ಬ್ಲ್ಯಾಕ್ & ವೈಟ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್‌ನಲ್ಲಿ ಮಳೆಯ ನಡುವೆ ನಿಂತಿರುವ ಯಶ್ ಅವರ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ಟೋಪಿ, ಉದ್ದನೆಯ ಕೋಟ್ ಧರಿಸಿ ಕೈಯಲ್ಲಿ ಬಂದೂಕು ಹಿಡಿದಿರುವ ಅವರ ಸ್ಟೈಲಿಶ್ ಲುಕ್‌ಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾಗಿದ್ದು, ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದಲ್ಲಿ ಯಶ್ ರಾಯ್ ಮತ್ತು ಟಿಕೆಟ್ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಿಯಾರಾ ಅಡ್ವಾಣಿ ‘ನಾಡಿಯಾ’, ನಯನತಾರಾ ‘ಗಂಗಾ’, ಹುಮಾ ಖುರೇಷಿ ‘ಎಲಿಜಬೆತ್’, ತಾರಾ ಸುತಾರಿಯಾ ‘ರೆಬೆಕ್ಕಾ’ ಹಾಗೂ ರುಕ್ಮಿಣಿ ವಸಂತ್ ‘ಮೆಲಿಸ್ಸಾ’ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಹಾಗೂ ಯಶ್ ನಿರ್ಮಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, ಉಜ್ವಲ್ ಕುಲಕರ್ಣಿ ಸಂಕಲನ ಮಾಡಿದ್ದಾರೆ. ಇದನ್ನೂ ಓದಿ : 76 ಕಲ್ಯಾಣ ಕರ್ನಾಟಕ ಪಿಡಿಓಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ; ಈಶ್ವರ ಖಂಡ್ರೆ

Related posts

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ನಿರ್ದೇಶನ

Kalpana Editor

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ; ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ಮಾಡಿದ ಕಾಂಗ್ರೆಸ್‌ – ಆರ್‌.ಅಶೋಕ

Kalpana Editor

ಒಂದೇ ತಿಂಗಳಲ್ಲಿ 12 ಲಕ್ಷಕ್ಕೂ ಅಧಿಕ ಭಕ್ತರಿಂದ ತಿರುಮಲದಲ್ಲಿ ಮುಡಿ ಸಮರ್ಪಣೆ..!

Kalpana Editor