28.2 C
ಬೆಂಗಳೂರು
October 13, 2026
kranthikidi.com
ತಾಜಾಸುದ್ದಿರಾಜ್ಯ

ಇಂದು ಟಾಕ್ಸಿಕ್ ಟ್ರೈಲರ್ ರಿಲೀಸ್‌ – ಸ್ಫೋಟಕ್ಕೆ ಟೈಮ್‌ ಫಿಕ್ಸ್‌..!

ಸ್ಯಾಂಡಲ್‌ವುಡ್‌ನಿಂದ ಹಿಡಿದು ಹಾಲಿವುಡ್‌ವರೆಗೂ ಭಾರೀ ನಿರೀಕ್ಷೆ ಮೂಡಿಸಿರುವ, ರಾಕಿಂಗ್ ಸ್ಟಾರ್ ಯಶ್ ನಟನೆ ಹಾಗೂ ನಿರ್ಮಾಣದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಲಿದ್ದು, ಇದೀಗ ಸಿನಿಮಾ ತಂಡ ಅಭಿಮಾನಿಗಳಲ್ಲಿ ಮತ್ತಷ್ಟು ಕೌತುಕ ಹೆಚ್ಚಿಸಿದೆ.

ಈ ಕುರಿತು ಸಿನಿಮಾ ತಂಡ ಮಾಹಿತಿ ಹಂಚಿಕೊಂಡಿದ್ದು, ಭಾರೀ ಸ್ಪೋಟ ಮತ್ತು ಬೆಂಕಿಯ ನಡುವೆ ಮಾಸ್ ಹಾಗೂ ಸ್ಟೈಲಿಶ್ ಲುಕ್‌ನಲ್ಲಿ ಯಶ್ ನುಗ್ಗುತ್ತಿದ್ದು, TRAILER 7:01 PM ಎಂದು ಬರೆಯಲಾಗಿದೆ. ಈ ಮೂಲಕ ಚಿತ್ರತಂಡ ಅಧಿಕೃತವಾಗಿ ಸಿನಿಮಾದ ಟ್ರೈಲರ್ ಬಿಡುಗಡೆ ಸಮಯ ಶೇರ್‌ ಮಾಡಿಕೊಂಡಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ (ರಾಯ್ ಮತ್ತು ಟಿಕೆಟ್ ಪಾತ್ರಗಳಲ್ಲಿ) ಜೊತೆಗೆ ಕಿಯಾರಾ ಅಡ್ವಾಣಿ (ನಾಡಿಯಾ), ನಯನತಾರಾ (ಗಂಗಾ), ಹುಮಾ ಖುರೇಷಿ (ಎಲಿಜಬೆತ್), ತಾರಾ ಸುತಾರಿಯಾ (ರೆಬೆಕ್ಕಾ) ಹಾಗೂ ರುಕ್ಮಿಣಿ ವಸಂತ್ (ಮೆಲಿಸ್ಸಾ) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾಗಿದ್ದು, ಬಳಿಕ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಹಾಗೂ ಯಶ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಹಾಗೂ ಉಜ್ವಲ್ ಕುಲಕರ್ಣಿ ಸಂಕಲನ ಒದಗಿಸಿದ್ದಾರೆ. ಇದನ್ನೂ ಓದಿ : ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್ – ಬೆಟ್ಟಕ್ಕೆ ವಾಹನಗಳಿಗೆ ನೋ ಎಂಟ್ರಿ..!

Related posts

ಕಲೇಶಪುರ ಹಾಲಿ ಶಾಸಕ ಹಾಗೂ ಮಾಜಿ ಮಾಜಿ ಶಾಸಕ ನಡುವಿನ ವಾಕ್ಸಮರ..!

Kalpana Editor

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!

kknewskannada1987@gmail.com

ಹೋಟೆಲ್‌ಗಳ ಮೇಲೆ ಮುಂದುವರೆದ ಫುಡ್ ಸೇಫ್ಟಿ ರೇಡ್; ರೆಸ್ಟೋರೆಂಟ್‌ಗಳಿಗೆ ನೋಟಿಸ್..!

kknewskannada1987@gmail.com