ತುಮಕೂರು : ನೆರೆಯ ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗಡಿಭಾಗವಾದ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ನಿರ್ದೇಶನದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತರೊಂದಿಗೆ ರಾಜವಂತಿ, ನಾಗಲಮಡಿಕೆ ಹಾಗೂ ಕೊಡಮಡುಗು ಗಡಿ ಭಾಗಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಆಂಧ್ರಪ್ರದೇಶದಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಿ, ಕೋವಿಡ್ ಸೋಂಕಿನ ಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ.
ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸೋಂಕು ಹರಡದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಆತಂಕಪಡದೆ ಮುನ್ನೆಚ್ಚರಿಕೆ ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ : ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಸರ್ಕಾರದ ವಿರುದ್ಧ ಆಕ್ರೋಶ – ಬಸವರಾಜ ಬೊಮ್ಮಾಯಿ
