21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿಸಿನಿಮಾ

ಒಂದೇ ತಿಂಗಳಲ್ಲಿ ಗಣೇಶ್ ನಟನೆಯ 2 ಸಿನಿಮಾಗಳು ರಿಲೀಸ್..!

ಸ್ಯಾಂಡಲ್‌ವುಡ್‌ನ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು (ಜುಲೈ 2) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಚಿತ್ರತಂಡಗಳು ಭರ್ಜರಿ ಉಡುಗೊರೆ ನೀಡಿವೆ. 2026ರ ಅಕ್ಟೋಬರ್ ತಿಂಗಳೊಂದರಲ್ಲೇ ಗಣೇಶ್ ನಟನೆಯ ಎರಡು ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದೆ. ಅವರ ಜನ್ಮದಿನಕ್ಕೆ ಈ ಘೋಷಣೆ ಆಗಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ, ಗಣೇಶ್ ಅವರ ವಿಭಿನ್ನ ಲುಕ್‌ನ ‘ಪಿನಾಕ’ ಸಿನಿಮಾ ಅಕ್ಟೋಬರ್ 2ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಬಗ್ಗೆ ಪೋಸ್ಟರ್‌ನಲ್ಲಿ ಮಾಹಿತಿ ನೀಡಲಾಗಿದೆ. ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಇದಾಗಿದ್ದು, ಕೊರಿಯೋಗ್ರಫರ್ ಆಗಿದ್ದ ಧನಂಜಯ್ ನಿರ್ದೇಶನ ಮಾಡುತ್ತಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ ವಿಶ್ವಪ್ರಸಾದ್ ಹಾಗೂ ಟಿ.ಜಿ ಕೃತಿ ಪ್ರಸಾದ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಶ್ರೀನಿವಾಸ್ ರಾಜು ನಿರ್ದೇಶನದ ಹಾಗೂ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಗಣೇಶ್ ಅವರ ‘ಬೃಂದವಿಹಾರಿ’ ಬಹುನಿರೀಕ್ಷಿತ ಸಿನಿಮಾ ಅಕ್ಟೋಬರ್ 16ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ಕರ್ನಾಟಕದಾದ್ಯಂತ ಬಿಡುಗಡೆ ಮಾಡುತ್ತಿದೆ. ಕೇವಲ ಎರಡು ವಾರಗಳ ಅಂತರದಲ್ಲಿ ನೆಚ್ಚಿನ ನಟನ ಎರಡು ಚಿತ್ರಗಳು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿರುವುದು ಸದ್ಯದ ಮಟ್ಟಿಗೆ ಅಭಿಮಾನಿಗಳಿಗೆ ಅತೀವ ಖುಷಿ ತಂದಿದ್ದು, ಹಬ್ಬದ ವಾತಾವರಣ ನಿರ್ಮಾಣ ಮಾಡಿದೆ.

ಒಂದೇ ತಿಂಗಳಲ್ಲಿ ಗಣೇಶ್ ಅವರ ಎರಡು ಸಿನಿಮಾಗಳು ಬರುತ್ತಿರುವುದು ಅಭಿಮಾನಿಗಳಿಗೆ ಸಖತ್ ಥ್ರಿಲ್ ಕೊಟ್ಟಿದ್ದರೂ, ಚಿತ್ರರಂಗದ ಕೆಲವು ವಿಶ್ಲೇಷಕರು ಮತ್ತು ಸಾಮಾನ್ಯ ಸಿನಿಪ್ರೇಮಿಗಳು ಬೇರೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಎರಡು ದೊಡ್ಡ ಸಿನಿಮಾಗಳ ನಡುವೆ ಕನಿಷ್ಠ ಒಂದು ತಿಂಗಳ ಗ್ಯಾಪ್ ಕೊಟ್ಟಿದ್ದರೆ ಎರಡೂ ಚಿತ್ರಗಳ ಬಿಸಿನೆಸ್, ಪ್ರಚಾರ ಹಾಗೂ ಕಲೆಕ್ಷನ್‌ಗೆ ಒಳ್ಳೆಯದಾಗುತ್ತಿತ್ತು ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳುತ್ತಿದ್ದಾರೆ.

ಒಂದೇ ನಟನ ಸಿನಿಮಾಗಳು ಇಷ್ಟು ಬೇಗ ಮುಖಾಮುಖಿಯಾದರೆ ಥಿಯೇಟರ್‌ಗಳ ಹಂಚಿಕೆಯಲ್ಲಿ ಸಮಸ್ಯೆ ಉಂಟಾಗಬಹುದು ಮತ್ತು ಪ್ರೇಕ್ಷಕರು ಹಂಚಿಹೋಗಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಅಕ್ಟೋಬರ್ ಹಬ್ಬದ ಸೀಸನ್‌ನಲ್ಲಿ ಗೋಲ್ಡನ್ ಸ್ಟಾರ್ ಬ್ಯಾಕ್-ಟು-ಬ್ಯಾಕ್ ಧಮಾಕಾ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಇದನ್ನೂ ಓದಿ : ಕಲ್ಲು ಕ್ವಾರಿ ದುರಂತ; ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ – ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕು – ಆರ್‌.ಅಶೋಕ

Related posts

ರಂಗಭೂಮಿ ಕಲಾವಿದ ನಟ ವಿಜಯ್ ಕುಮಾರ್ ಜಿತ್ತೂರಿ ನಿಧನ..!

kknewskannada1987@gmail.com

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ..!

Kalpana Editor

ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಡ್ಯಾಂಗಳು

Kalpana Editor