July 22, 2026
kranthikidi.com
ತಾಜಾಸುದ್ದಿದೇಶರಾಜ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು..!

ಹುಬ್ಬಳ್ಳಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದಾಗಿದೆ. ಜುಲೈ 24ರಂದು ಹುಬ್ಬಳ್ಳಿಗೆ ಆಗಮಿಸಿ, ಜುಲೈ 25ರಂದು ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ, ದೆಹಲಿಯಲ್ಲಿ ನಡೆದಿರುವ ಮಹತ್ವದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಈ ಪ್ರವಾಸವನ್ನು ರದ್ದುಪಡಿಸಲಾಗಿದೆ.

ಅಮಿತ್ ಶಾ ಅವರ ಭೇಟಿಗೆ ಸಂಬಂಧಿಸಿದಂತೆ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಈಗಾಗಲೇ ಅವರ ಸಿಬ್ಬಂದಿ ಹುಬ್ಬಳ್ಳಿಗೆ ಆಗಮಿಸಿ ಸಿದ್ಧತೆ ನಡೆಸುತ್ತಿದ್ದರು. ಸದ್ಯ ಪ್ರವಾಸ ರದ್ದಾದ ಹಿನ್ನೆಲೆ ಜುಲೈ 25ರಂದು ನಡೆಯಬೇಕಿದ್ದ ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮವೂ ಮುಂದೂಡಲಾಗಿದೆ. ಪ್ರವಾಸಕ್ಕೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ – ಆರ್.ಅಶೋಕ್‌

Related posts

ನಮ್ಮ ಡ್ಯಾಂಗಳು ತಮಿಳುನಾಡಿಗೆ ನೀರು ಬಿಡುವ ಡ್ಯಾಂಗಳಾಗಿವೆ; ಹೆಚ್‌ಡಿಕೆ ಕಿಡಿ

Kalpana Editor

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ..!

Kalpana Editor

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’ – ಎಸ್. ಜಾನಕಿ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ ಸಂತಾಪ..!

Kalpana Editor