August 1, 2026
kranthikidi.com
ತಾಜಾಸುದ್ದಿರಾಜ್ಯ

ಇಂದು ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಶಬರಿಮಲೆ : ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟರು ಎನ್ನಲಾಗಿದೆ.

ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡವು, ತದನಂತರ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿ ಶಬರಿಮಲೆ ಅಂತ ಸಾಗಲಿದೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕ ದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ.

ಇದಕ್ಕೂ ಮೊದಲು ಅವರು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರ ತಂಡದೊಂದಿಗೆ ಕೇಂದ್ರ ಸಚಿವರು ಯಾತ್ರೆ ಕೈಗೊಂಡಿದ್ದಾರೆ. ಇದನ್ನೂ ಓದಿ : ಬೆಂಗಳೂರು ಏರ್​ಪೋರ್ಟ್​ನಲ್ಲಿ ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ..!

Related posts

ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ..!

Kalpana Editor

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ನಟ ಸ್ಪಷ್ಟನೆ..!

Kalpana Editor

ದೇವರ ಮಹೋತ್ಸವ ಕಾರ್ಯಕ್ರಮದಲ್ಲಿ ಊಟ ಸೇವನೆ; 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!

Kalpana Editor