August 1, 2026
kranthikidi.com
ತಾಜಾಸುದ್ದಿದೇಶ

ಲೋಕಸಭೆಯಲ್ಲಿ ಮತ್ತೆ ʻನೀಟ್‌ʼ ಗದ್ದಲ – ಕಲಾಪ ಮುಂದೂಡಿಕೆ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆಯಲ್ಲಿ ʻನೀಟ್‌ʼ ಕುರಿತು ಗದ್ದಲ ಮುಂದುವರಿದ ಹಿನ್ನೆಲೆ, ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಮುಂದುವರಿಯಿತು. ನೀಟ್ ಪರೀಕ್ಷೆ ವಿವಾದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದವು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಚರ್ಚೆಗೆ ಸರ್ಕಾರ ಸಮ್ಮತಿ ನೀಡಿದ್ದರೂ, ಚರ್ಚೆಗೆ ಮುನ್ನವೇ ʻಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕುʼ ಎಂದು ವಿಪಕ್ಷಗಳು ಪಟ್ಟು ಹಿಡಿದು ಘೋಷಣೆ ಕೂಗಿದವು. ಈ ಹಿನ್ನೆಲೆ ಲೋಕಸಭೆಯ ಸದನವನ್ನ ಸೋಮವಾರದ ವರೆಗೆ (ಜು.27) ಮುಂದೂಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆ ಸದನ ಪುನಾರಂಭಗೊಂಡ ಕೆಲವೇ ಕ್ಷಣಗಳಲ್ಲಿ ವಿಪಕ್ಷ ಸದಸ್ಯರು ʻEducation Minister Resignʼ, ʻಇಸ್ತೀಫಾ, ಇಸ್ತೀಫಾʼ ಎಂದು ಘೋಷಣೆ ಕೂಗಿದರು.

ಇದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಗಿ, ಲೋಕಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಕೇಂದ್ರ ಸಚಿವ ಕಿರಣ್ ರಿಜಿಜು, ನೀಟ್ ವಿಚಾರದಲ್ಲಿ ಚರ್ಚೆ ನಡೆಯಲು ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಲೋಕಸಭೆಯಲ್ಲಿ ಮನವಿ ಮಾಡಿದರು. ನೀಟ್ ವಿಷಯದ ಬಗ್ಗೆ ಚರ್ಚೆ ನಡೆಸುವುದನ್ನ ತಪ್ಪಿಸಲು ಕಾರಣಗಳನ್ನ ಹುಡುಕಿದರೆ, ಅದು ದೇಶಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಹೇಳಿದರು.

ಸದನದ ಅಧ್ಯಕ್ಷತೆ ವಹಿಸಿದ್ದ ಜಗದಂಬಿಕಾ ಪಾಲ್, ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ಕೈಬಿಟ್ಟು ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು. ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ತಿಳಿಸಿದ ಅವರು, ತಮ್ಮ ಆಕ್ಷೇಪಣೆಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಗಮನಕ್ಕೆ ತಂದು ಸದನದಲ್ಲಿ ಶಾಂತಿ ಕಾಪಾಡುವಂತೆ ಸದಸ್ಯರನ್ನು ಕೋರಿದರು. ಲೋಕಸಭೆಯಲ್ಲಿ ವಿಪಕ್ಷ ಸದಸ್ಯರು ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಕೆಲ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆ ಸ್ಪೀಕರ್‌ ಕಲಾಪ ಮುಂದೂಡಿದರು. ಇದನ್ನೂ ಓದಿ : ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ – ಸಿಎಂ ಡಿ ಕೆ ಶಿವಕುಮಾರ್

Related posts

3 ರಿಂದ 6 ತಿಂಗಳಲ್ಲಿ ವಿಜಯ್‌ ಸರ್ಕಾರ ಪತನ ಗ್ಯಾರಂಟಿ – ಎಂ.ಕೆ ಸ್ಟಾಲಿನ್

Kalpana Editor

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

Kalpana Editor

ಬೆಂಗಳೂರಿನ ಕೆಲವು ಭಾಗದಲ್ಲಿ ಜು. 04, 05 ರಂದು ವಿದ್ಯುತ್‌ ವ್ಯತ್ಯಯ..!

Kalpana Editor