20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ವರುಣಾ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದ, ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವರುಣಾ ವಿಧಾನಸಭಾ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳ ತೀವ್ರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅನಾವೃಷ್ಟಿಯಿಂದ ಉಂಟಾಗಿರುವ ಪರಿಸ್ಥಿತಿಯ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಬರದ ಸ್ಥಿತಿಗತಿ, ಬೆಳೆ ನಷ್ಟದ ಪ್ರಮಾಣ ಹಾಗೂ ಕುಡಿಯುವ ನೀರಿನ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದು, ತಕ್ಷಣವೇ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದರು.

ಜೊತೆಗೆ, ರೈತರು ಹಾಗೂ ಸಾರ್ವಜನಿಕರು ಯಾವುದೇ ತೊಂದರೆಗೆ ಒಳಗಾಗದಂತೆ ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು, ಸರ್ಕಾರದ ನೆರವು ಶೀಘ್ರ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಬರದಿಂದ ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸರ್ಕಾರ ಮಾನವೀಯತೆ ಹಾಗೂ ಆದ್ಯತೆಯೊಂದಿಗೆ ಸ್ಪಂದಿಸಲಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ : ಕಾಮನ್‌ವೆಲ್ತ್ ಗೇಮ್ಸ್‌ – ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ

Related posts

“ಗ್ಯಾರಂಟಿ ಮೋಸ” – ಗೃಹಜ್ಯೋತಿ ಮರು ಪರಿಶೀಲನೆಗೆ ಜೆಡಿಎಸ್ ಕಿಡಿ..!

Kalpana Editor

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ – ಯತೀಂದ್ರ

Kalpana Editor

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ..!

Kalpana Editor