20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

3 ರಿಂದ 6 ತಿಂಗಳಲ್ಲಿ ವಿಜಯ್‌ ಸರ್ಕಾರ ಪತನ ಗ್ಯಾರಂಟಿ – ಎಂ.ಕೆ ಸ್ಟಾಲಿನ್

ಚೆನ್ನೈ : ಸಿಎಂ ಜೋಸೆಫ್‌ ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ 5 ವರ್ಷಗಳ ವರೆಗೆ ಉಳಿಯುವುದಿಲ್ಲ. 3 ರಿಂದ 6 ತಿಂಗಳಲ್ಲಿ ಪತನವಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಭವಿಷ್ಯ ನುಡಿದಿದ್ದಾರೆ. ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್‌ ಅವರು, ವಿಜಯ್‌ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ವಿಜಯ್‌ ಅವರ ಸರ್ಕಾರ ಮೈತ್ರಿ ಪಕ್ಷಗಳ ಬೆಂಬಲದಿಂದಷ್ಟೇ ಬದುಕುಳಿದಿದೆ. ಈ ಸರ್ಕಾರ 5 ವರ್ಷ ಪೂರ್ಣಗೊಳ್ಳುವುದಿಲ್ಲ. ವಿಜಯ್ ಅವದ್ದು ಅಲ್ಪಸಂಖ್ಯಾತ ಸರ್ಕಾರವಾಗಿದ್ದು, ಮುಂದಿನ 3 ರಿಂದ 6 ತಿಂಗಳ ಒಳಗೆ ಪತನಗೊಳ್ಳಬಹುದು. ಆಡಳಿತಾರೂಢ ಟಿವಿಕೆ ಸ್ವತಂತ್ರವಾಗಿ ಆಡಳಿತ ನಡೆಸಲು ಪೂರ್ಣ ಜನಾದೇಶ ಹೊಂದಿಲ್ಲ. ಅಗತ್ಯ 118 ಬಹುಮತದ ಪೈಕಿ 108 ಸ್ಥಾನಗಳನ್ನು ಮಾತ್ರ ಗಳಿಸಿದೆ. ಈ ಚುನಾವಣೆಯಲ್ಲಿ ಜನ ಡಿಎಂಕೆ ಸರ್ಕಾರ ರಚಿಸಬೇಕೆಂದೇ ಮತ ಚಲಾಯಿಸಿದ್ದರು.

ಆದರೆ, ನಮ್ಮ ಮೈತ್ರಿಕೂಟದ ಭಾಗವಾಗಿದ್ದ ಕೆಲ ಪಕ್ಷಗಳ ತಂತ್ರ ಹಾಗೂ ಅವರ ಜೊತೆಗಿನ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ. ಇದೊಂದು ಅಲುಗಾಡುವ ಸೆಟಪ್, ಈ ವಾಹನ ಯಾವ ಜಂಕ್ಷನ್ ಅಥವಾ ತಿರುವಿನಲ್ಲಿ ತನ್ನ ಸಮತೋಲನ ಕಳೆದುಕೊಂಡು ಹಠಾತ್ ಸ್ಥಗಿತಗೊಳ್ಳುತ್ತೋ ಗೊತ್ತಿಲ್ಲ. ಆದ್ದರಿಂದ ಚುನಾವಣೆಗಳು ಯಾವುದೇ ಸಮಯದಲ್ಲಿ ಬರಬಹುದು. 5 ವರ್ಷಗಳ ಕಾಲ ಕಾಯುವ ಅಗತ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ : ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ..!

Related posts

ಮನೆಯಲ್ಲಿ ಜರ್ಮ್ಸ್‌ ಹೆಚ್ಚಾಗದಂತೆ ತಡೆಯುವುದು ಹೇಗೆ..? ಕೆಲವು ಸರಳ ಸಲಹೆಗಳು..!

kknewskannada1987@gmail.com

ಸೋಪಿನ ಪೌಡರ್ ಬಳಸಿ 2.3 ಕೋಟಿ ಲೀಟರ್ ನಕಲಿ ಹಾಲು ಮಾರಾಟ..!

Kalpana Editor

ಕೆಆರ್‌ಎಸ್‌ ನೀರಿನ ಮಟ್ಟ ಹೆಚ್ಚು – ಎರಡೇ ದಿನದಲ್ಲಿ 5 ಅಡಿ ಏರಿಕೆ..!

Kalpana Editor