kranthikidi.com
ಕ್ರೀಡೆತಾಜಾಸುದ್ದಿ

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ..!

ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್ ಅಥವಾ ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ. ಈ ನಿಯಮವನ್ನು ಉಲ್ಲಂಘಿಸುವ ಆಟಗಾರರು ಅಥವಾ ಸಿಬ್ಬಂದಿಗೆ ಭಾರಿ ಮೊತ್ತದ ದಂಡ ಮತ್ತು ತಕ್ಷಣದ ಅಮಾನತು ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ಕ್ವಾಲಿಫೈಯರ್-2 ಹಾಗೂ ಫೈನಲ್ ಪಂದ್ಯಗಳ ವೇಳೆ ಸ್ಮಾರ್ಟ್ ಗ್ಲಾಸ್ ಹಾಗೂ ಹೈ-ಟೆಕ್ ಗ್ಲಾಸ್​ಗಳನ್ನು ಬಳಸದಂತೆ ಸೂಚಿಸಲಾಗಿದೆ.

ಆರ್​ಸಿಬಿ ಮತ್ತು ಆರ್​ಆರ್​ ನಡುವಣ ಪಂದ್ಯದ ವೇಳೆ ಡಗೌಟ್​ನಲ್ಲಿ ಮೊಬೈಲ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪಂದ್ಯದ ವೇಳೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಹಾಗೆಯೇ ಪಂದ್ಯದ ವೇಳೆ ಫ್ರಾಂಚೈಸಿ ಮಾಲೀಕರು ಡಗೌಟ್​ಗೆ ಪ್ರವೇಶಿಸುವುದನ್ನು, ಮ್ಯಾಚ್ ನಡುವೆ ಮೈದಾನಕ್ಕೆ ಎಂಟ್ರಿ ಕೊಡುವುದನ್ನು ಹಾಗೂ ಆಟಗಾರರನ್ನು ಮಾತನಾಡಿಸುವುದನ್ನು ಬಿಸಿಸಿಐ ನಿಷೇಧಿಸಿದೆ.

ಇದರ ಜೊತೆಗೆ ಇದೀಗ ಭದ್ರತೆಯನ್ನು ಕಾಪಾಡಿಕೊಳ್ಳಲು ಹಾಗೂ ಐಪಿಎಲ್​ನ ಪಾರದರ್ಶಕತೆಯನ್ನು ಹೆಚ್ಚಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಮಂಡಳಿ ಸ್ಮಾರ್ಟ್ ಗ್ಲಾಸ್ ಬಳಕೆಯನ್ನು ನಿಷೇಧಿಸಿದೆ.

Related posts

ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ನೆ ಬಿಡಲ್ಲ – ನಟ ದೊಡ್ಡಣ್ಣ

Kalpana Editor

ಜಿನೆವಾದಲ್ಲಿ ಅಮೆರಿಕ-ಇರಾನ್‌ ಶಾಂತಿ ಮಾತುಕತೆ; ಮುನೀರ್‌ ಹತ್ಯೆಗೆ ಇಸ್ರೇಲ್‌ ಸಂಚು..!

Kalpana Editor

ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ..!

Kalpana Editor