28.2 C
ಬೆಂಗಳೂರು
July 11, 2026
kranthikidi.com
ಆರೋಗ್ಯತಾಜಾಸುದ್ದಿ

ಪ್ರತಿದಿನ ಬ್ಲೂಬೆರ್ರಿ ತಿಂದರೆ, ದೇಹದಲ್ಲಿ ಏನೆಲ್ಲಾ ಆಗುತ್ತದೆ..!

ಆರೋಗ್ಯಕರ ಆಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಸೂಪರ್‌ಫುಡ್‌ಗಳಲ್ಲಿ ಬ್ಲೂಬೆರ್ರಿ ಪ್ರಮುಖ ಸ್ಥಾನ ಪಡೆದಿದೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಪೋಷಕಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಈ ಹಣ್ಣು ದೇಹಕ್ಕೆ ಹಲವು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ.

ಈ ಹಣ್ಣು ಸ್ವಲ್ಪ ದುಬಾರಿಯಾಗಿರುವುದರಿಂದ ಜನ ಇದನ್ನು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನೀವು ಊಹಿಸಲೂ ಸಾಧ್ಯವಿಲ್ಲದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವೃದ್ಧಾಪ್ಯವನ್ನು ನಿಧಾನಗೊಳಿಸುವ ಶಕ್ತಿ ಇದೆ – ಬ್ಲೂಬೆರ್ರಿಯಲ್ಲಿರುವ ಆಂಥೋಸೈನಿನ್ ಎಂಬ ಆಂಟಿಆಕ್ಸಿಡೆಂಟ್ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಇದರಿಂದ ಚರ್ಮದ ಆರೋಗ್ಯ ಉತ್ತಮವಾಗಿದ್ದು, ವಯಸ್ಸಾಗುವ ಲಕ್ಷಣಗಳು ತಡವಾಗಿ ಕಾಣಿಸಿಕೊಳ್ಳುತ್ತದೆ. ಯಾವಾಗಲೂ ಯಂಗ್ ಆಗಿ ಕಾಣುವುದಕ್ಕೆ ಇದು ಒಂದು ಕಾರಣವಾಗಬಹುದು.

ಹೃದಯದ ಆರೋಗ್ಯಕ್ಕೆ ಒಳ್ಳೆಯದು – ಬ್ಲೂಬೆರ್ರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತನಾಳಗಳ ಕಾರ್ಯಕ್ಷಮತೆ ಸುಧಾರಿಸಬಹುದು. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗುವುದರಿಂದ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಮೆದುಳಿನ ಕಾರ್ಯಕ್ಷಮತೆ ಹೆಚ್ಚಿಸಬಹುದು – ಈ ಹಣ್ಣಿನಲ್ಲಿರುವ ಪೋಷಕಾಂಶಗಳು ಮೆದುಳಿನ ಕೋಶಗಳ ನಡುವಿನ ಸಂವಹನವನ್ನು ಉತ್ತಮಗೊಳಿಸಲು ಸಹಕಾರಿಯಾಗಬಹುದು. ಇದರಿಂದ ನೆನಪಿನ ಶಕ್ತಿ, ಏಕಾಗ್ರತೆ ಮತ್ತು ಚಿಂತನಾ ಸಾಮರ್ಥ್ಯ ಹೆಚ್ಚಾಗಬಹುದು.

ರಕ್ತದಲ್ಲಿನ ಸಕ್ಕರೆ ಮತ್ತು ತೂಕ ನಿಯಂತ್ರಣಕ್ಕೆ ಸಹಕಾರಿ – ಬ್ಲೂಬೆರ್ರಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಹಾಗೂ ಫೈಬರ್ ಅಧಿಕವಾಗಿರುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯವಾಗಬಹುದು. ಜೊತೆಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುವುದರಿಂದ ತೂಕ ನಿಯಂತ್ರಣಕ್ಕೂ ನೆರವಾಗುತ್ತದೆ.

ಹೇಗೆ ಸೇವಿಸಬೇಕು? – ತಾಜಾ ಬ್ಲೂಬೆರ್ರಿಯನ್ನು ನೇರವಾಗಿ ತಿನ್ನಬಹುದು. ಅಲ್ಲದೆ ಓಟ್ಸ್, ಮೊಸರು, ಸ್ಮೂದಿ ಅಥವಾ ಹಣ್ಣಿನ ಸಲಾಡ್‌ನಲ್ಲಿ ಸೇರಿಸಿಕೊಂಡರೂ ಉತ್ತಮ. ಆದರೆ ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಮೊದಲು ತಜ್ಞರ ಸಲಹೆ ಪಡೆಯುವುದು ಉತ್ತಮವಾಗಿದೆ. ಇದನ್ನೂ ಓದಿ : ಭಾಮಾ ಹರೀಶ್ ಪುತ್ರ ನಿಧನ; ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ

Related posts

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ..!

Kalpana Editor

ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ..!

Kalpana Editor

ಪಾಗಲ್​​ ಪ್ರೇಮಿಯ ದಾರುಣ ಅಂತ್ಯ – ಸ್ಫೋಟಕದ ಬಗ್ಗೆ ಖಾಕಿ ತನಿಖೆ..!

Kalpana Editor