24.7 C
ಬೆಂಗಳೂರು
August 3, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು..?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ವಿಮಾನ ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯದ ಮುಂದಿನ ನಡೆಗಳ ಕುರಿತು ತೀವ್ರ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವುದು ಈ ಪ್ರವಾಸದ ಮುಖ್ಯ ಉದ್ದೇಶ ಎನ್ನಲಾಗಿದೆ. ತಮಗೆ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಹೈಕಮಾಂಡ್ ಮುಕ್ತ ಅವಕಾಶ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ವಲಯದಲ್ಲಿ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಅಧಿಕೃತವಾಗಿ ನಿಗದಿಯಾಗಿಲ್ಲ. ಹೈಕಮಾಂಡ್ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ದೇಶನವನ್ನು ನೀಡಿಲ್ಲ. ಈ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ನಡೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಒಂದು ವೇಳೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಸಿದ್ದರಾಮಯ್ಯ ದೆಹಲಿ ತಲುಪಿದರೆ, ರಾಜ್ಯ ರಾಜಕೀಯ ಮತ್ತೊಂದು ಪ್ರಮುಖ ಟ್ವಿಸ್ಟ್ ಪಡೆಯುವ ಸಾಧ್ಯತೆಯಿದೆ. ಕೃತಜ್ಞತೆ ಸಲ್ಲಿಸೋದು ಮಾತ್ರ ಅಲ್ಲ, ಹೈಕಮಾಂಡ್ ಮಟ್ಟದಲ್ಲಿ ತಮಗೆ ಆಪ್ತರಾಗಿರುವ ನಾಯಕರನ್ನು ಹುದ್ದೆಗೆ ತರಲು ಅಥವಾ ಮುಂದಿನ ರಾಜಕೀಯ ತಂತ್ರಗಾರಿಕೆಗೆ ಹೊಸ ದಾಳ ಉರುಳಿಸಲು ಸಿದ್ದರಾಮಯ್ಯ ಅವರಿಗೆ ಇದು ಸೂಕ್ತ ವೇದಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Related posts

ಪ್ರಧಾನಮಂತ್ರಿಗಳಾಗಿ 4399 ದಿನ ನಿರಂತರ ಸೇವೆ; ಬಿ.ವೈ. ವಿಜಯೇಂದ್ರ ಮೆಚ್ಚುಗೆ..!

Kalpana Editor

ಡಿಕೆಶಿ ಮನೆದೇವತೆಗೆ ವಿಶೇಷ ಪೂಜೆ – ಬಲಗಡೆ ಹೂ ಪ್ರಸಾದ ನೀಡಿದ ಕೆಂಕೆರಮ್ಮ

Kalpana Editor

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ; ಆರೋಪಿ ಪುಣ್ಯೇಶ್ ಅರೆಸ್ಟ್‌..!

Kalpana Editor